ಆಟವಾಡುತ್ತಾ ಉಂಗುರ ನುಂಗಿದ 8 ತಿಂಗಳ ಮಗು ಮೃತ್ಯು

-ಮುನೀರ್ ಎಂಬವರ ಮಗು ಮೃತ್ಯು

ಮ‌ಡಿಕೇರಿ;ಉಂಗುರ ನುಂಗಿ 8 ತಿಂಗಳ ಮಗು ಮೃತಪಟ್ಟಿರುವ ದಾರುಣ ಘಟನೆ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರಡಿಗೋಡು ಗ್ರಾಮದಲ್ಲಿ ನಡೆದಿದೆ.

ಮುನೀರ್ ಎಂಬವರ ಮಗು ಬುಧವಾರ ರಾತ್ರಿ ಮನೆಯಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಉಂಗುರ ನುಂಗಿತ್ತು.

ತಕ್ಷಣ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮಗುವನ್ನು ದಾಖಲಿಸಿದರೂ ಉಸಿರಾಟದ ಸಮಸ್ಯೆಯಿಂದಾಗಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.

ಮಡಿಕೇರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮೂಲಕ ಉಂಗುರವನ್ನು ಹೊರತೆಗೆಯಲಾಗಿದೆ.ಆದರೆ ಬೆಳಿಗ್ಗೆ ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್