ಭದ್ರಾವತಿ; ವಿಚಾರಣಾಧೀನ ಕೈದಿ ಜೈಲಿನಲ್ಲಿ ಆತ್ಮಹತ್ಯೆ

ಶಿವಮೊಗ್ಗ:ಕೊಲೆ ಪ್ರಕರಣದ ಆರೋಪಿಯೋರ್ವ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆಂಟ್ರಲ್ ಜೈಲಿನಲ್ಲಿ ನಡೆದಿದೆ.

ಭದ್ರಾವತಿ ನಗರದ ದೇವಸ್ಥಾನದ ಬಳಿ ವೃದ್ಧೆ ಒಬ್ಬರನ್ನು ಕೊಲೆ ಮಾಡಿ, ಅವರ ಬಳಿ ಇದ್ದ ಹಣವನ್ನ ಕಿತ್ತುಕೊಂಡಿದ್ದ ಆರೋಪದ ಮೇಲೆ ಜೈಲಿನಲ್ಲಿದ್ದ ವಿಚಾರಣಾಧೀನ ಖೈದಿ ಕರುಣಾಕರ ದೇವಾಡಿಗ (23) ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕಳೆದ ನಾಲ್ಕು ತಿಂಗಳ ಹಿಂದೆ ಭದ್ರಾವತಿ ನಗರದ ದೇವಸ್ಥಾನದ ಬಳಿ ಅನಾಥ ವೃದ್ಧೆಯ ಬಳಿ ಇದ್ದ ಹಣ ದೋಚಿ, ಬಳಿಕ ಅಜ್ಜಿಯನ್ನು ಮರ್ಡರ್ ಮಾಡಿ ಕರುಣಾಕರ್ ಎಸ್ಕೇಪ್ ಆಗಿದ್ದನು. ಬಳಿಕ ಈತನನ್ನು ಬಂಧಿಸುವಲ್ಲಿ ಭದ್ರಾವತಿ ಪೊಲೀಸರು ಯಶಸ್ವಿಯಾಗಿದ್ದರು.

ಕೊಲೆ ಪ್ರಕರಣ ಎದುರಿಸುತ್ತಿದ್ದ ಕರುಣಾಕರ್ ಲವ್ ಮಾಡಿ ಮದುವೆಯಾಗಿದ್ದು, ಬಳಿಕ ಚಿಕ್ಕಮಗಳೂರಿನ ತರಿಕೇರಿಯಲ್ಲಿ ಸಪ್ಲೈಯರ್ ಕೆಲಸ ಮಾಡಿಕೊಂಡಿದ್ದನು.

ಭದ್ರಾವತಿ ತಾಲೂಕಿನ ಬಾರಂದೂರಿನ ನಿವಾಸಿಯಾಗಿರುವ ಕರುಣಾಕರ್ ಕಳೆದ ನಾಲ್ಕು ತಿಂಗಳಿನಿಂದ ಸೆಂಟ್ರಲ್ ಜೈಲಿನಲ್ಲಿದ್ದನು.ಕರುಣಾಕರನ್ ಆತ್ಮಹತ್ಯೆಯಿಂದ ಕುಟುಂಬಸ್ಥರ ರೋಧನ‌ ಮುಗಿಲು ಮುಟ್ಟಿದೆ.

ಕೊಲೆ ಕೇಸ್​ನಲ್ಲಿ ಬಂಧನಕ್ಕೊಳಗಾಗಿದ್ದ ಕರುಣಾಕರ್ ವಿಚಾರಣೆ ಎದುರಿಸುತ್ತಿದ್ದನು. ಕುಟುಂಬಸ್ಥರು ಕರುಣಾಕರ್​ಗೆ ಜಾಮೀನಿಗೆ ಪ್ರಯತ್ನ ಮಾಡುತ್ತಿದ್ದರು. ಈ ನಡುವೆ ಕರುಣಾಕಾರ್ ಆತ್ಮಹತ್ಯೆ ಮಾಡಿಕೊಂಡಿದ್ದು ಯಾಕೆ ಎನ್ನುವ ಪ್ರಶ್ನೆ ಮೂಡಿದೆ.

ಟಾಪ್ ನ್ಯೂಸ್

ಪ್ರವೀಣ್ ನೆಟ್ಟಾರು ಪತ್ನಿಗೆ ತೋರಿದ ಮಾನವೀಯತೆ ಫಾಝಿಲ್ & ಮಸೂದ್ ಕುಟುಂಬಕ್ಕೆ ತೋರಿಸುತ್ತಾರ ಸಿದ್ದರಾಮಯ್ಯ?ಬಿಜೆಪಿ ಅವಧಿಯಲ್ಲಿ ಹತ್ಯೆಯಾದ ಯುವಕರಿಬ್ಬರ ಕುಟುಂಬಕ್ಕೆ ಪರಿಹಾರ ಕೊಡಿಸುವಲ್ಲಿ‌ ಕಾಂಗ್ರೆಸ್ಸಿಗರು ಮೌನ?

BIG NEWS ತೀವ್ರಗೊಂಡ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆ, ನೂತನ ಸಂಸತ್ ಭವನಕ್ಕೆ ಮೆರವಣಿಗೆ ತೆರಳಲು ಯತ್ನ; ಸಾಕ್ಷಿ ಮಲಿಕ್, ವಿನೇಶ್ ಪೋಗಟ್ ಸೇರಿ ಹಲವರು ವಶಕ್ಕೆ

ನವದೆಹಲಿ;ನೂತನ ಸಂಸತ್​ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸುತ್ತಿದ್ದ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿದ್ದಾರೆ.

Developed by eAppsi.com