ಕಾಸರಗೋಡು; ಯುವಕನನ್ನು ಚೂರಿಯಿಂದ ಇರಿದು ಕೊಲೆ

ಕಾಸರಗೋಡು:ಯುವಕನನ್ನು ಚೂರಿಯುಂದ ಇರಿದು ಕೊಲೆಗೈದ ಘಟನೆ ಬದಿಯಡ್ಕದಲ್ಲಿ ನಡೆದಿದೆ.

ಮಧೂರು ಅರಂತೋಡಿನ ಸಂದೀಪ್ ಗೆ ಕೊಲೆ ಮಾಡಲಾಗಿದೆ.ಯುವತಿಗೆ ಕಿರುಕುಳ ನೀಡಿದ್ದನ್ನು ಪ್ರಶ್ನಿಸಿದ್ದಕ್ಕೆ
ಪೆರ್ಲ ಕಜಂಪಾಡಿಯ ಪವನ್ ರಾಜ್ ಎಂಬಾತ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.

ಚೂರಿ ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ಸಂದೀಪ್ ನನ್ನು ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನದ ವೇಳೆ ಮೃತಪಟ್ಟಿದ್ದಾರೆ.

ಇದೀಗ ಆರೋಪಿಯ ಪತ್ತೆಗೆ ಬದಿಯಡ್ಕ ಪೊಲೀಸರು ಶೋಧ ನಡೆಸುತ್ತಿದ್ದಾರೆ.ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಟಾಪ್ ನ್ಯೂಸ್