ಕಾಲೇಜಿನಲ್ಲೇ ಪ್ರಾಂಶುಪಾಲ ಆತ್ಮಹತ್ಯೆ; ಬೆಳಿಗ್ಗೆ ನಡೆಯಬೇಕಿದ್ದ ಕಾರ್ಯಕ್ರಮಕ್ಕೆ ತಯಾರಿ ನಡೆಸುತ್ತಿದ್ದ ಪ್ರಾಂಶುಪಾಲರಿಗೆ ದಿಡೀರ್ ಆಗಿದ್ದೇನು?

ಬಾಗಲಕೋಟೆ:ಸರ್ಕಾರಿ ಕಾಲೇಜ್ ಪ್ರಿನ್ಸಿಪಾಲ್ ಒಬ್ಬರು ಕಾಲೇಜಿನಲ್ಲೇ ನೇಣು ಬಿಗಿದು ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಹುನಗುಂದ ಪಟ್ಟಣದಲ್ಲಿರುವ ಸರ್ಕಾರಿ ಕಾಲೇಜಿನಲ್ಲಿ ಪ್ರಿನ್ಸಿಪಾಲ್‌ ನಾಗರಾಜ್‌ ಮುದ್ಗಲ್‌ (50) ಕಾಲೇಜಿನ ಸ್ಟೇರ್‌ಕೇಸ್‌ನ ಗ್ರಿಲ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಾಲೇಜಿನಲ್ಲಿ ಜನಪದ ಸಂಸ್ಕೃತಿ ಕಾರ್ಯಕ್ರಮ ಆಯೋಜನೆಯಾಗಿದೆ.ಕಾರ್ಯಕ್ರಮ ಯಶಸ್ವಿಯಾಗಿ ನಡೆಯಬೇಕು ಎಂಬ ಕಾರಣಕ್ಕಾಗಿ ಅವರು ಸೋಮವಾರ ದಿನ ಬ್ಯುಸಿಯಾಗಿದ್ದರು. ರಾತ್ರಿಯವರೆಗೂ ವ್ಯವಸ್ಥೆಯ ಮೇಲ್ವಿಚಾರಣೆ ನೋಡಿಕೊಂಡಿದ್ದ ಅವರು ಬಳಿಕ ಮನೆಗೆ ಹೋಗಿದ್ದರು.

ರಾತ್ರಿ ಒಂದು ಗಂಟೆ ಸುಮಾರಿಗೆ ಮತ್ತೆ ಕಾಲೇಜಿನಲ್ಲಿ ಕೆಲಸವಿದೆ ಎಂದು ಹೇಳಿ ಬೈಕ್‌ನಲ್ಲಿ ಕಾಲೇಜಿಗೆ ಬಂದಿದ್ದರು. ಬೆಳಗ್ಗೆ ವಿದ್ಯಾರ್ಥಿಗಳು ಕಾಲೇಜಿಗೆ ಬಂದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಕಾಲೇಜಿಗೆ ಬಂದಿರುವ ನಾಗರಾಜ್‌ ಪತ್ನಿ ಮತ್ತು ಪುತ್ರನ ಆಕ್ರಂದನ ಮುಗಿಲು ಮುಟ್ಟಿದೆ.ಘಟನೆ ಬೆನ್ನಲ್ಲೇ ಸ್ಥಳಕ್ಕೆ ಹುನಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್