ಬೆಂಗಳೂರು;ಪ್ರೀತಿ ನಿರಾಕರಿಸಿದ ಯುವತಿಗೆ ಚಾಕುವಿನಿಂದ ಇರಿದು ಯುವಕನೋರ್ವ ಕೊಲೆಗೆ ಯತ್ನಿಸಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ಅತ್ತಿಬೆಲೆ ಬಸ್ ನಿಲ್ದಾಣದಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಮೂಲದ ಶ್ರೀನಿವಾಸ (28)ಈ ಕೃತ್ಯವನ್ನು ಎಸಗಿದ್ದು, ಆತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಯುವತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ.
ಶ್ರೀನಿವಾಸ ಯುವತಿಗೆ ಪ್ರೀತಿಸುವಂತೆ ಪದೇ ಪದೇ ಪೀಡಿಸುತ್ತಿದ್ದ ಎನ್ನಲಾಗಿದ್ದು, ಆದರೆ ಯುವತಿ ಪ್ರೀತಿಸಲು ನಿರಾಕರಿಸಿದ್ದಾಳೆ. ಇದರಿಂದ ಕೋಪಗೊಂಡು ಬಸ್ ನಿಲ್ದಾಣದಲ್ಲೇ ಯುವತಿಯ ಕುತ್ತಿಗೆ ಭಾಗವನ್ನು ಚಾಕಿನಿಂದ ಸೀಳಿ ಕೊಲೆಗೆ ಯತ್ನಿಸಿದ್ದಾನೆ.
ಇರಿತದಿಂದ ಗಂಭೀರವಾಗಿ ಗಾಯಗೊಂಡು ಚೀರಾಡುತ್ತಿದ್ದ ಯುವತಿಯನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.
ಸ್ಥಳಕ್ಕಾಗಮಿಸಿದ ಅತ್ತಿಬೆಲೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದು, ಘಟನೆ ಸಂಬಂಧ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.