ಹಿಂದುತ್ವ ಸಂಘಟನೆ ಬಜರಂಗಸೇನೆ ಕಾಂಗ್ರೆಸ್ ಜೊತೆ ವಿಲೀನ

ಹಿಂದುತ್ವ ಸಂಘಟನೆ ಬಜರಂಗಸೇನೆ ಕಾಂಗ್ರೆಸ್ ಜೊತೆ ವಿಲೀನ

ಭೋಪಾಲ್:ಜನಾದೇಶವನ್ನು ವಂಚಿಸಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ ಎಂದು ಆರೋಪಿಸಿ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ತಿಂಗಳುಗಳ ಮೊದಲು ಹಿಂದುತ್ವ ಸಂಘಟನೆ ಭಜರಂಗ ಸೇನೆ ಕಾಂಗ್ರೆಸ್‌ನೊಂದಿಗೆ ವಿಲೀನಗೊಂಡಿದೆ.

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಮಾಜಿ ಸಚಿವ ದೀಪಕ್ ಜೋಶಿ ಅವರಿಗೆ ಬಜರಂಗಸೇನೆ (ಬಿಎಸ್) ನಾಯಕರು ಆಪ್ತರು. ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ಸಮ್ಮುಖದಲ್ಲಿ ವಿಲೀನ ಪ್ರಕ್ರಿಯೆ ನಡೆದಿದೆ.

ಬಿಎಸ್ ರಾಷ್ಟ್ರೀಯ ಅಧ್ಯಕ್ಷ ರಜನೀಶ್ ಪಟೇರಿಯಾ ಮತ್ತು ಸಂಯೋಜಕ ರಘುನಂದನ್ ಶರ್ಮಾ ಅವರು ವಿಲೀನದ ಘೋಷಣೆ ಮಾಡಿದ್ದಾರೆ.ಜೋಶಿ ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಬಿಎಸ್ಸೆಸ್ ಸದಸ್ಯರು ಕಮಲನಾಥ್ ಅವರಿಗೆ ಗದೆ ಮತ್ತು ಸ್ಮರಣಿಕೆಗಳನ್ನು ನೀಡಿದರು ಮತ್ತು ಜೈ ಶ್ರೀರಾಮ್ ಘೋಷಣೆಗಳನ್ನು ಕೂಗಿದರು.

ಈ ಬೆಳವಣಿಗೆಯನ್ನು ಸ್ವಾಗತಿಸಿರುವ ಕಮಲನಾಥ್, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಚುನಾವಣೆ ಸಮೀಪಿಸುತ್ತಿರುವಂತೆಯೇ ಪೊಳ್ಳು ಘೋಷಣೆಗಳನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಚೌಹಾಣ್ ಅವರು ಇದುವರೆಗೆ 20,000 ಕ್ಕೂ ಹೆಚ್ಚು ಘೋಷಣೆಗಳನ್ನು ಮಾಡಿದ್ದಾರೆ, ಅದು ಎಂದಿಗೂ ಕಾರ್ಯರೂಪಕ್ಕೆ ಬಂದಿಲ್ಲ. ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ, ಚೌಹಾಣ್ ಈಗ ಮಹಿಳೆಯರು, ಯುವಕರು ಮತ್ತು ಉದ್ಯೋಗಿಗಳನ್ನು ನೆನಪಿಸಿಕೊಳ್ಳುತ್ತಿದ್ದಾರೆ. ಅವರು ಅಧಿಕಾರದಲ್ಲಿದ್ದಾಗ ಅವರು ಕಳೆದ 18 ವರ್ಷಗಳಲ್ಲಿ ಅವರಿಗೆ ಏನನ್ನೂ ಮಾಡಿಲ್ಲ ಎಂದು ಕಮಲನಾಥ್ ಹೇಳಿದ್ದಾರೆ.

ಕುದುರೆ ವ್ಯಾಪಾರದ ಮೂಲಕ ಅಧಿಕಾರಕ್ಕೆ ಬಂದ ಬಿಜೆಪಿಯ ಆಡಳಿತವನ್ನು ಈ ಬಾರಿ ಕೊನೆಗೊಳಿಸಲು ಜನರು ನಿರ್ಧರಿಸಿದ್ದಾರೆ ಎಂದು ಇದೇ ವೇಳೆ ಕಮಲನಾಥ್ ಹೇಳಿದ್ದಾರೆ.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ