ಮಂಗಳೂರು; ತಟ್ಟೆ ತೊಳೆಯುವ ವಿಚಾರಕ್ಕೆ ಗಲಾಟೆ, ಯುವಕನ ಕೊಲೆ

ಮಂಗಳೂರು:ಊಟ ಮಾಡಿದ ತಟ್ಟೆ ತೊಳೆಯುವ ವಿಚಾರದಲ್ಲಿ ನಡೆದ ಘಟನೆ ಕೊಲೆಯಲ್ಲಿ ಕೊನೆಯಾದ ಘಟನೆ ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಮರವೂರು ಗ್ರಾಮದ ಪೋಸ್ಟಲ್ ಗಾರ್ಡ್ ಸೈಟ್ ನಲ್ಲಿ ನಡೆದಿದೆ.

ಉತ್ತರ ಭಾರತ ಮೂಲದ ಸಂಜಯ್ ಮೃತ ಯುವಕ. ಸಂಜಯ್ ಮತ್ತು ಸೋಹಾನ್ ಯಾದವ್ ಎಂಬಿಬ್ಬರ ನಡುವೆ ಜಗಳ ನಡೆದಿದ್ದು, ಸೋಹನ್ ಯಾದವ್ ಸಂಜಯ್ ನನ್ನು ಬಲವಾಗಿ ಹಿಂದಕ್ಕೆ ತಳ್ಳಿದ್ದ.ಈ ವೇಳೆ ಕೆಳಗೆ ಬಿದ್ದ ಸಂಜಯ್ ತಲೆಗೆ ಗಂಭೀರ ಗಾಯವಾಗಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಲ್ಲಿ ಆತ ಕೊನೆಯುಸಿರೆಳೆದಿದ್ದಾನೆ.

ಘಟನೆ ಬಳಿಕ ಪರಾರಿಯಾಗಿದ್ದ ಆರೋಪಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ‌

ಟಾಪ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆ;ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದೇಕೆ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು;ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ

Developed by eAppsi.com