ಬಜ್ಪೆ; ಸಾರ್ವಜನಿಕ ಸ್ಥಳದಲ್ಲಿ ಜಗಳವಾಡುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು

ಬಜ್ಪೆ: ಸಾರ್ವಜನಿಕ ಸ್ಥಳದಲ್ಲಿ ಅವಾಚ್ಯ ಶಬ್ದಗಳಿಂದ ಬೈದು ಜಗಳವಾಡುತ್ತಿದ್ದ ಇಬ್ಬರನ್ನು ಬಜ್ಪೆ
ಠಾಣೆ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ.

ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಗುರುಪುರ ಕೈಕಂಬ ಬಸ್ ನಿಲ್ದಾಣದ ಸಮೀಪ ಘಟನೆ ನಡೆದಿದೆ.

ಬಂಧಿತರನ್ನು ಬಂಟ್ವಾಳ ತಾಲೂಕು ತೆಂಕಬೆಳ್ಳೂರು ಗ್ರಾಮದ ನಿವಾಸಿ ಶಿವಪ್ರಸಾದ್ (39) ಮತ್ತು ಶಕ್ತಿನಗರ ಕಾರ್ಮಿಕ ಕಾಲನಿ‌ ನಿವಾಸಿ ಷಡ್ರಕ್ ಇಮ್ಯಾನುವಲ್ ಯಾನೆ ಮನು (39) ಎಂದು ತಿಳಿದು ಬಂದಿದೆ.

ಆರೋಪಿಗಳು ಗುರುಪುರ ಕೈಕಂಬ ಬಸ್ ನಿಲ್ದಾಣದಲ್ಲಿ ವೈಯಕ್ತಿಕ ವಿಚಾರವಾಗಿ ಪರಸ್ಪರ ಅವಾಚ್ಯ ಶಬ್ದಗಳಿಂದ ನಿಂದಿ ಸುತ್ತಾ ಹೊಡೆದಾಡಿಕೊಂಡಿದ್ದಾರೆ.ಈ ಬಗ್ಗೆ ಸ್ಥಳೀಯರು ಬಜ್ಪೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಸ್ಥಳಕ್ಕೆ ತೆರಳಿದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಯುಐಡಿಎಐ ಅರೆಕಾಲಿಕ ಅಧ್ಯಕ್ಷರಾಗಿ ನೀಲಕಂಠ ಮಿಶ್ರಾ ನೇಮಕ

ಆಕ್ಸಿಸ್ ಬ್ಯಾಂಕಿನ ಮುಖ್ಯ ಅರ್ಥಶಾಸ್ತ್ರಜ್ಞ ಮತ್ತು ಆಕ್ಸಿಸ್ ಕ್ಯಾಪಿಟಲ್ನ ಜಾಗತಿಕ ಸಂಶೋಧನಾ ಮುಖ್ಯಸ್ಥ ನೀಲಕಂಠ ಮಿಶ್ರಾ ಅವರನ್ನು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದ ಅರೆಕಾಲಿಕ ಅಧ್ಯಕ್ಷರಾಗಿ ನೇಮಿಸಲಾಗಿದೆ.

ಕೋಟಕ್ ಮಹೀಂದ್ರಾ ಅಸೆಟ್ ಮ್ಯಾನೇಜ್ಮೆಂಟ್ ಕಂಪನಿ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕ ನಿಲೇಶ್ ಶಾ ಮತ್ತು ಐಐಟಿ ದೆಹಲಿಯ ಕಂಪ್ಯೂಟರ್ ಸೈನ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರೊಫೆಸರ್ ಮೌಸಮ್ ಅರೆಕಾಲಿಕ ಸದಸ್ಯರಾಗಲಿದ್ದಾರೆ.

ಟಾಪ್ ನ್ಯೂಸ್