ಕುಂಬಳೆ:ಪುತ್ರನ ಸಾವಿನ ಬಳಿಕ ನೊಂದುಕೊಂಡುದ್ದ ತಂದೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂಬಳೆ ಬಳಿಯ ಬಂಬ್ರಾಣ ಕಲ್ಕುಲ ಬಳಿ ನಡೆದಿದೆ.
ಕಲ್ಲಿನ ಮೇಸ್ತ್ರಿ ಕೆಲಸ ಮಾಡುತ್ತಿದ್ದ ಲೋಕೇಶ್ (52) ಮೃತರು.ಲೋಕೇಶ್ ಮೃತದೇಹ ನಿನ್ನೆ ಬೆಳಿಗ್ಗೆ ಉಳ್ಳಾಲ ಕಡಲ ಕಿನಾರೆಯಲ್ಲಿ ಪತ್ತೆಯಾಗಿದೆ.
ಇವರ ಪುತ್ರ ರಾಜೇಶ್(26) ಕಳೆದ ಜುಲೈ ತಿಂಗಳ 10 ರಂದು ನಾಪತ್ತೆಯಾಗಿದ್ದರು.ಬಳಿಕ ಜು.12 ರಂದು ಬೆಳಗ್ಗೆ ರಾಜೇಶ್ ನ ಮೃತದೇಹ ತೊಕ್ಕೊಟ್ಟು ಬಳಿಯ ಬೆಂಗರೆ ನೇತ್ರಾವತಿ ನದಿ ತೀರದಲ್ಲಿ ಪತ್ತೆಯಾಗಿತ್ತು.
ಮಗನ ಸಾವಿನ ಬಳಿಕ ತಂದೆ ಲೋಕೇಶ್ ನೊಂದುಕೊಂಡಿದ್ದರು.ನಿನ್ನೆ ಬೆಳಗ್ಗೆ 9.00 ಗಂಟೆಯ ವೇಳೆ ಪರಿಸರದ ಕೆಲವು ಮಂದಿಗೆ ಲೋಕೇಶ್ ರವರು ಮೊಬೈಲ್ನಲ್ಲಿ ವಾಟ್ಸಪ್ ಸಂದೇಶ ಕಳುಹಿಸಿದ್ದರು.ಅದರಲ್ಲಿ ನಾನು ಈಗ ಸೋಮೇಶ್ವರಕ್ಕೆ ಹೋಗಿ ಸಮುದ್ರಕ್ಕೆ ಹಾರುತ್ತೇನೆ. ನನ್ನ ಹೆಣ ಉಳ್ಳಾಲದಲ್ಲಿ ಸಿಗಬಹುದು ನಾನು ಮೊಬೈಲ್ ಕೊಂಡು ಹೋಗುವುದಿಲ್ಲ ಮನೆಯಲ್ಲಿ ಇಟ್ಟು ಹೋಗ್ತೇನೆ ಎಂದು ಹೇಳಿ ಮನೆಯಿಂದ ತೆರಳಿದ್ದರು.
ಕೂಡಲೇ ಈ ವಿಷಯವನ್ನು ಪೊಲೀಸರಿಗೆ ಮನೆಯವರು ತಿಳಿಸಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.ಬಳಿಕ 11.00 ಗಂಟೆ ವೇಳೆ ಲೋಕೇಶ್ ರ ಮೃತದೇಹ ಉಳ್ಳಾಲದಲ್ಲಿ ಮೀನುಗಾರರಿಗೆ ಸಿಕ್ಕಿದೆ.
ಬಳಿಕ ಮೃತದೇಹವನ್ನು ಉಳ್ಳಾಲ ಪೊಲೀಸರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಮರಣೋತ್ತರ ಪರೀಕ್ಷೆ ನಡೆಸಿ, ಇಂದು ಬೆಳಗ್ಗೆ ಮನೆಯವರಿಗೆ ಬಿಟ್ಟು ಕೊಟ್ಟುಕೊಟ್ಟಿದ್ದಾರೆ.