ಬೆಂಗಳೂರು;ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕೇರಳದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.
ಅಬ್ದುಲ್ ಖಾದರ್ (61) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.ಕೇರಳದಿಂದ ಬೆಂಗಳೂರಿಗೆ ಬಂದಿದ್ದ ಅವರು ಯಶವಂತಪುರದಿಂದ ಮೆಜೆಸ್ಟಿಕ್‌ಗೆ ಬಿಎಂಟಿಸಿ ಬಸ್‌ನಲ್ಲಿ ತೆರಳುತ್ತಿದ್ದರು,ಈ ವೇಳೆ ಕುಳಿತಿದ್ದ ಸೀಟ್ ಮೇಲೆಯೇ ಕುಸಿದು ಬಿದ್ದಿದ್ದಾರೆ.
ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಈ ವೇಳೆ ಅವರು ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ.