ಕಾಲಿಗೆ ಕಟ್ಟಿದ್ದ ಬ್ಯಾಂಡೆಜ್ ಒಳಗಡೆ ಲಕ್ಷಾಂತರ ಮೌಲ್ಯದ ಚಿನ್ನ, ಪ್ರಯಾಣಿಕನ ಪ್ಲ್ಯಾನ್ ಗೆ ಅಧಿಕಾರಿಗಳು ಶಾಕ್

ಬೆಂಗಳೂರು;ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾಲಿಗೆ ಕಟ್ಟಿದ್ದ ಬ್ಯಾಂಡೇಜ್ ನಲ್ಲಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬ್ಯಾಂಕಾಕ್ ನಿಂದ ಬಂದಿಳಿದಿದ್ದ ಪ್ರಯಾಣಿಕನನ್ನು ಅನುಮಾನದ ಮೇರೆಗೆ ವಶಕ್ಕೆ ಪಡೆದು ಕಸ್ಟಮ್ಸ್ ಅಧಿಕಾರಿಗಳು ಪರಿಶೀಲಿಸಿದಾಗ ಆತ ಚಿನ್ನ ಕಳ್ಳಸಾಗಾಣಿಕೆ ಮಾಡಿರುವುದು ಪೊಲೀಸರು ಕಂಡುಕೊಂಡಿದ್ದಾರೆ.

ಈ ಪ್ರಯಾಣಿಕ ತನ್ನ ಕಾಲಿಗೆ ಸುತ್ತಿಕೊಂಡಿದ್ದ ಬ್ಯಾಂಡೇಜ್ ನಲ್ಲಿ ಬರೋಬ್ಬರಿ 43 ಲಕ್ಷ ರೂಪಾಯಿ ಮೌಲ್ಯದ 700 ಗ್ರಾಂ ಚಿನ್ನವನ್ನು ಆಡಗಿಸಿಟ್ಟುಕೊಂಡಿದ್ದು, ಕಸ್ಟಮ್ಸ್ ಅಧಿಕಾರಿಗಳು ಚಿನ್ನವನ್ನು ವಶಪಡಿಸಿಕೊಂಡಿದ್ದು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಚಿಕ್ಕಮಗಳೂರು;ಎನ್‌ಎಸ್‌ಜಿ ಕಮಾಂಡೋ ಅಪಘಾತದಲ್ಲಿ ಮೃತ್ಯು

ಚಿಕ್ಕಮಗಳೂರು;ರಾಷ್ಟ್ರೀಯ ಭದ್ರತಾ ಪಡೆಯ ಬ್ಲ್ಯಾಕ್‌ ಕ್ಯಾಟ್‌ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದ ದೀಪಕ್‌ (22) ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಎನ್‌ಎಸ್‌ಜಿ ಕಮ್ಯಾಂಡೋ ದೀಪಕ್ ತರೀಕೆರೆ ತಾಲೂಕಿನ ತಣಿಗೇಬೈಲು ನಿವಾಸಿ ಆಗಿದ್ದರು. ಇತ್ತೀಚೆಗೆ ಎನ್.ಎಸ್.ಜಿ. ಬ್ಲ್ಯಾಕ್ ಕ್ಯಾಟ್ ಕಮಾಂಡೋವಾಗಿ ನೇಮಕವಾಗಿದ್ದರು.

ಕಳೆದ 2020ರಲ್ಲಿ ಮದುವೆಯಾಗಿದ್ದ ದೀಪಕ್‌ ಮನೆಯಲ್ಲಿ ಕಾರ್ಯಕ್ರಮವಿದ್ದ ಹಿನ್ನೆಲೆಯಲ್ಲಿ ಒಂದು ತಿಂಗಳ ರಜೆ ಮೂಲಕ ತವರೂರಿಗೆ ವಾಪಸ್‌ ಬಂದಿದ್ದರು. ಊರಿಗೆ ಬಂದು ಹೊಸ ಬೈಕ್‌ ಅನ್ನು ಖರೀದಿ ಮಾಡಿದ್ದರು. ಈಗ ರಜೆ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಕೆಲಸಕ್ಕೆ ಮರಳಿ ಹೋಗಬೇಕಿತ್ತು.ಆದರೆ ವಿಧಿಯಾಟವೇ ಬೇರೆಯಾಗಿದ್ದು, ಅವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಟಾಪ್ ನ್ಯೂಸ್

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆ; ಮಕ್ಕಳು ಆಟವಾಡುವಾಗ ಆಕಸ್ಮಿಕವಾಗಿ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ

ನವದೆಹಲಿ; ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿರುವ ಶಾಕಿಂಗ್ ಘಟನೆ ರಾಷ್ಟ್ರ

Developed by eAppsi.com