ಬೆಂಗಳೂರು;ಐವರು ಶಂಕಿತ ಉಗ್ರರನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಬಂಧಿಸಿರುವುದಾಗಿ ತಿಳಿದು ಬಂದಿದೆ.
ಸಿಸಿಬಿ ಪೊಲೀಸರು ಇಂದು ಜುನೈದ್, ಸೊಹೈಲ್, ಉಮರ್, ಮುದಾಸಿರ್ ಮತ್ತು ಜಾಹಿದ್ ಎಂಬ ಶಂಕಿತರನ್ನು ಬಂಧಿಸಿದ್ದಾರೆ ಎಂದು ಹೇಳಲಾಗಿದೆ.
ಸದ್ಯ 7 ಪಿಸ್ತೂಲ್ , ಹಲವಾರು ಸ್ಫೋಟಕ ವಸ್ತುಗಳು ಮತ್ತು ಇತರ ವಸ್ತುಗಳನ್ನು ಮತ್ತು ಅವರ ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಪೊಲೀಸರ ಪ್ರಕಾರ, ಬಂಧಿತ ಐವರು ಆರೋಪಿಗಳು 2017 ರ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಅವರನ್ನು ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿತ್ತು, ಅಲ್ಲಿ ಅವರು ಕೆಲವು ಭಯೋತ್ಪಾದಕರೊಂದಿಗೆ ಸಂಪರ್ಕಕ್ಕೆ ಬಂದರು ಮತ್ತು ಸ್ಫೋಟಕಗಳನ್ನು ನಿರ್ವಹಿಸುವ ಬಗ್ಗೆ ತರಬೇತಿ ಪಡೆದಿದ್ದರು ಎನ್ನಲಾಗಿದೆ.