ಬೆಟ್ಟದ ಮೇಲಿನಿಂದ ಆತ್ಮಹತ್ಯೆ ಮಾಡಿಕೊಳ್ಳಲೆಂದು ಜಿಗಿದು ಬಂಡೆಗಳ ನಡುವೆ ಸಿಲುಕಿದ ಕಾಲೇಜು ವಿದ್ಯಾರ್ಥಿಗಳು, ಪೊಲೀಸರಿಂದ ಕಾರ್ಯಾಚರಣೆ

ಬೆಟ್ಟದ ಮೇಲಿನಿಂದ ಆತ್ಮಹತ್ಯೆ ಮಾಡಿಕೊಳ್ಳಲೆಂದು ಜಿಗಿದು ಬಂಡೆಗಳ ನಡುವೆ ಸಿಲುಕಿದ ಕಾಲೇಜು ವಿದ್ಯಾರ್ಥಿಗಳು, ಪೊಲೀಸರಿಂದ ಕಾರ್ಯಾಚರಣೆ

ಬೆಂಗಳೂರು;ಬೆಟ್ಟದ ಮೇಲಿನಿಂದ ಜಿಗಿದು ಕಾಲೇಜು ವಿದ್ಯಾರ್ಥಿಗಳಿಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ರಾಮದೇವರ ಬೆಟ್ಟದ ಮೇಲಿಂದ ಬೆಂಗಳೂರಿನ ಕಾಲೇಜೊಂದರ ಪ್ರಥಮ ಬಿ.ಇ. ವಿದ್ಯಾರ್ಥಿ ಚೇತನ್‌ (19) ಹಾಗೂ ಅದೇ ಕಾಲೇಜಿನ ಪ್ರಥಮ ಬಿ.ಕಾಂ.ವಿದ್ಯಾರ್ಥಿನಿ ಸಾಹಿತ್ಯ(19) ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಬೆಳಿಗ್ಗೆ ಬೆಟ್ಟದ ಮೇಲಿಂದ ಜಿಗಿದು ಬಂಡೆಗಳ ಮಧ್ಯೆ ಸಿಲುಕಿ ಗಾಯಗೊಂಡಿದ್ದ ಪ್ರೇಮಿಗಳನ್ನು 3 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಪೊಲೀಸರು ರಕ್ಷಿಸಿದ್ದಾರೆ.

ಗಾಯಾಳುಗಳನ್ನು ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ವಿದ್ಯಾರ್ಥಿಗಳನ್ನು ಕಾರ್ಯಾಚರಣೆ ನಡೆಸಿ ಪ್ರಾಣ ರಕ್ಷಿಸಿದ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಟಾಪ್ ನ್ಯೂಸ್