ಪೊಲೀಸ್ ಅಧಿಕಾರಿಗೆ ಮುಸ್ಲಿಂ ಎಂದು ನಿಂದಿಸಿದ ಆ್ಯಡಂ ಬಿದ್ದಪ್ಪ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಖ್ಯಾತ ಫ್ಯಾಶನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಅವರ ಪುತ್ರ ಆ್ಯಡಂ ಬಿದ್ದಪ್ಪ ವಿರುದ್ಧ ಪೊಲೀಸ್ ಅಧಿಕಾರಿಗೆ ಮುಸ್ಲಿಂ ಎಂದು ನಿಂದಿಸಿದ ಕಾರಣಕ್ಕೆ ಪ್ರಕರಣ ದಾಖಲಾಗಿದೆ.

ಧರ್ಮ ನಿಂದನೆ ಮೂಲಕ ಧಾರ್ಮಿಕ ಭಾವನೆಗಳನ್ನು ಕೆರಳಿಸಿದ ಆರೋಪದ ಮೇಲೆ ಆ್ಯಡಂ ಬಿದ್ದಪ್ಪ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಕಳೆದ ವಾರ ಕುಡಿದು ವಾಹನ ಚಾಲನೆ ಮತ್ತು ವಿದ್ಯಾರ್ಥಿ ಗೆ ನಿಂದಿಸಿ ಬೆದರಿಕೆ ಪ್ರಕರಣದಲ್ಲಿ ಆ್ಯಡಂಗೆ ಪ್ರಶ್ನಿಸಿದಾಗ ಆ್ಯಡಂ ಪೊಲೀಸ್ ಅಧಿಕಾರಿಯ ಧರ್ಮವನ್ನು ಅವಮಾನಿಸಿದ್ದ. ಈ ಕುರಿತ ವಿಡಿಯೋ ವೈರಲ್ ಆಗಿತ್ತು.

ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯ ಸಹಾಯಕ ಸಬ್ ಇನ್ಸ್‌ಪೆಕ್ಟರ್ 45 ವರ್ಷದ ಗೌಸ್ ಪಾಷಾ ಆ್ಯಡಂ ವಿರುದ್ಧ ದೂರು ನೀಡಿದ್ದಾರೆ.

ಆ್ಯಡಂ ಬಿದ್ದಪ್ಪ ಅಧಿಕಾರಿಯೊಂದಿಗೆ ವಾಗ್ವಾದ ನಡೆಸಿ, ‘ಗೌಸ್, ಗೌಸ್ ಪಾಷಾ, ಒಬ್ಬ ಮುಸ್ಲಿಂ’ ಎನ್ನುತ್ತಾ ಪೋಲೀಸರ ಮೇಲೆ ಉಗುಳುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿತ್ತು.

ಟಾಪ್ ನ್ಯೂಸ್

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೂಡಿ ಹಾಕಿ ಚಿತ್ರಹಿಂಸೆ; ವಿಧ್ಯಾಭ್ಯಾಸಕ್ಕೆಂದು ಕರೆದುಕೊಂಡು ಹೋಗಿ ಮನೆಗೆಲಸ ಮಾಡುವಂತೆ ಬಲವಂತ!

7 ತಿಂಗಳುಗಳಿಂದ ಬಾತ್ರೂಮ್​ನಲ್ಲಿ ಬಂಧಿಯಾಗಿದ್ದ 20 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಅಮೆರಿಕಾದ ಅಧಿಕಾರಿಗಳು