ಬೆಂಗಳೂರು;ಸ್ಕೂಟರ್ ಹಿಂಬದಿ ಹಿಡಿದ ವ್ಯಕ್ತಿಯನ್ನು ಒಂದೂವರೆ ಕಿ.ಮೀ ಎಳೆದೊಯ್ದ ಯುವಕ; ವಿಡಿಯೋ ವೈರಲ್ ..

ಬೆಂಗಳೂರು: ಬೈಕ್ ಸವಾರನೊಬ್ಬ ಒಂದೂವರೆ ಕಿಲೋ ಮೀಟರ್ ದೂರಕ್ಕೆ ಕಾರು ಚಾಲಕನನ್ನು ಎಳೆದೊಯ್ದ ಘಟನೆ ಮಾಗಡಿ ರಸ್ತೆಯ ಟೋಲ್ ಗೇಟ್ ಬಳಿ ನಡೆದಿದೆ.

ಟೋಲ್ ಗೇಟ್ ಬಳಿ ಟಾಟಾ ಸುಮೋಗೆ ಬೈಕ್ ಸವಾರ ಡಿಕ್ಕಿ ಹೊಡೆದಿದ್ದು, ಇದನ್ನು ಪ್ರಶ್ನಿಸಲು ಹೋದಾಗ ಬೈಕ್ ಏರಿ ಸವಾರ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಕಾರು ಚಾಲಕ ಬೈಕ್ ಹಿಂಭಾಗ ಹಿಡಿದಿದ್ದು, ಬೈಕ್ ಸವಾರ ಆ ವ್ಯಕ್ತಿಯನ್ನು ಒಂದೂವರೆ ಕಿಲೋ ಮೀಟರ್ ದೂರಕ್ಕೆ ಎಳೆದೊಯ್ದಿದ್ದಾನೆ.

ಬೈಕ್​ನಲ್ಲಿ ಎಳೆದೊಯ್ತುತ್ತಿರುವುದನ್ನು ನೋಡಿದ ಇತರೆ ವಾಹನ ಸವಾರರು ಬೈಕ್ ನ್ನು ಅಡ್ಡಹಾಕಿ ಪ್ರಶ್ನಿಸಿದ್ದಾರೆ. ಮಾಹಿತಿ ತಿಳಿದ ವಿಜಯ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಯುವಕನಿಗೆ ವಶಕ್ಕೆ ಪಡೆದುಕೊಂಡಿದ್ದಾರೆ.

ಟಾಪ್ ನ್ಯೂಸ್