-ಸುಹೇಲ್ ಕೊಲೆಯಾದ ವಿದ್ಯಾರ್ಥಿ
ಬೆಂಗಳೂರು: ಕಾಲೇಜು ವಿದ್ಯಾರ್ಥಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ರಾಜಧಾನಿಯ ಕಾಲೇಜೊಂದರ ಬಳಿ ನಡೆದಿದೆ.
ಬಸವೇಶ್ವರನಗರದ ಮಂಜುನಾಥ್ ನಗರ ಗೌತಮ್ ಕಾಲೇಜ್ ಬಳಿ ಈ ಘಟನೆ ನಡೆದಿದ್ದು, ಸುಹೇಲ್ (17) ಎಂಬ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.
ಡ್ಯಾನ್ಸ್ ಮಾಡುವ ವಿಚಾರಕ್ಕೆ ಸಂಬಂಧಿಸಿ ವಿದ್ಯಾರ್ಥಿಗಳ ನಡುವೆ ಜಗಳ ನಡೆದು ಕೊಲೆ ನಡೆದಿದೆ ಎಂದು ಹೇಳಲಾಗಿದೆ.
ಚಾಕುವಿನಿಂದ ಇರಿತಕ್ಕೊಳಗಾಗಿದ್ದ ಸುಹೇಲ್‌ನನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಆತ ದಾರಿ ಮಧ್ಯದಲ್ಲೇ ಪ್ರಾಣ ಕಳೆದುಕೊಂಡಿದ್ದಾನೆ.
ಸ್ಥಳಕ್ಕೆ ಬಸವೇಶ್ವರ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.