ಪುತ್ತೂರು;ನಳಿನ್ ಕುಮಾರ್ ಕಟೀಲ್ ಮತ್ತು ಡಿ.ವಿ.ಸದಾನಂದ ಗೌಡ ಅವರಿಗೆ ಶ್ರದ್ದಾಂಜಲಿ ಕೋರಿ ಬ್ಯಾನರ್ ಅಳವಡಿಸಿದ ಪ್ರಕರಣದಲ್ಲಿ ಬಂಧಿತ ಆರೋಪಿಗಳಿಗೆ
ಪೊಲೀಸರು ದೌರ್ಜನ್ಯ ನಡೆಸಿರುವ ಆರೋಪ ಕೇಳಿ ಬಂದಿದೆ.
ಘಟನೆಗೆ ಸಂಬಂಧಿಸಿದ ಪೋಟೋಗಳು ಹಾಗೂ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಪುತ್ತೂರು ತಾಲೂಕಿನ ನರಿಮೊಗರು ನಿವಾಸಿಗಳಾದ ವಿಶ್ವನಾಥ, ಮಾಧವ, ಅಭಿ ಯಾನೆ ಅವಿನಾಶ್, ಶಿವರಾಮ್, ಚೈತ್ರೇಶ್, ಈಶ್ವರ್, ನಿಶಾಂತ್, ದೀಕ್ಷಿತ್, ಗುರುಪ್ರಸಾದ್ ಬಂಧಿತ ಆರೋಪಿಗಳು.ಇವರಿಗೆ ಪ್ರಭಾವಿಗಳ ಒತ್ತಡಕ್ಕೆ ಒಳಗಾಗಿ ಪೊಲೀಸರು ಆರೋಪಿಗಳಿಗೆ ಚಿತ್ರ ಹಿಂಸೆ ನೀಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಟೋ ವೈರಲ್ ಆಗುತ್ತಿದೆ.
ಪ್ರಭಾವಿಗಳ ಒತ್ತಡಕ್ಕೆ ಒಳಗಾಗಿ ಪೊಲೀಸರು ಆರೋಪಿಗಳಿಗೆ ಚಿತ್ರ ಹಿಂಸೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ಬಂಧಿತ ಆರೋಪಿಗಳನ್ನು ಪಕ್ಷೇತರ ಅಭ್ಯರ್ಥಿಯಾಗಿದ್ದ ಅರುಣ್ ಕುಮಾರ್ ಪುತ್ತಿಲ ಅವರು ಜಾಮೀನು ಮೂಲಕ ಠಾಣೆಯಿಂದ ಕರೆದೊಯ್ದಿದ್ದಾರೆ ಎನ್ನಲಾಗಿದೆ.
ಇನ್ನೊಂದು ವಿಡಿಯೋದಲ್ಲಿ ಯುವಕರು ನಡೆದಾಡಲು ಕಷ್ಟ ಪಡುವ ರೀತಿಯಲ್ಲಿ ಹೆಜ್ಜೆ ಹಾಕುತ್ತಿರುವವುದು ವಿಡಿಯೋದಲ್ಲಿ ಸೆರೆಯಾಗಿದೆ.
ಈ ಬಗ್ಗೆ ಜಿಲ್ಲಾ ಎಸ್ಪಿ ಪ್ರತಿಕ್ರಿಯಿಸಿದ್ದು,ಬಿಜೆಪಿ ರಾಜ್ಯಾಧ್ಯಕ್ಷರ ಬ್ಯಾನರಿಗೆ ಚಪ್ಪಲಿ ಹಾರ ಪ್ರಕರಣದಲ್ಲಿ ಪುತ್ತೂರು ನಗರ ಠಾಣೆಯಲ್ಲಿ ದಸ್ತಗಿರಿ ಮಾಡಿದ ಆರೋಪಿಗಳಿಗೆ ಹಲ್ಲೆ ಬಗ್ಗೆ
ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದೆ.ಈ ಬಗ್ಗೆ ಸತ್ಯಾoಶ ತಿಳಿದುಕೊಳ್ಳಲು ವಿಚಾರಣೆ ನಡೆಸಲಾಗುವುದು ಎಂದು ಹೇಳಿದ್ದಾರೆ.