ಮಂಗಳೂರು;ನೆಹರೂ ಮೈದಾನದ ಬಳಿ ಬಂಟ್ವಾಳದ ನಿವಾಸಿ ಜನಾರ್ದನ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಕೇರಳದ ಪ್ರಶಾಂತ್ (40), ಕುಶಲನಗರದ ಜಿ.ಕೆ ರವಿಕುಮಾರ್ (38), ಕೊಣಾಜೆಯ ವಿಜಯ ಕುಟಿನ್ಹಾ (28) ಬಂಟ್ವಾಳದ ಶರತ್.ವಿ (36) ಎಂದು ಗುರುತಿಸಲಾಗಿದೆ.
ಜನಾರ್ದನ ಪೂಜಾರಿ ನಿನ್ನೆ ಸಂಜೆ ಸ್ಟೇಟ್ ಬ್ಯಾಂಕ್ ಬಳಿಯ ಮೈದಾನದ ಬಳಿ ಮಲಗಿದ್ದರು.ಅವರ ಹತ್ತಿರ ಬಂದು ಆರೋಪಿಗಳು ಮೊಬೈಲ್ ಕೊಡುವಂತೆ ಕೇಳಿದ್ದಾರೆ. ಕೊಡದಿದ್ದಾಗ ಮಾತಿಗೆ ಮಾತು ಬೆಳೆದು
ಆರೋಪಿಗಳಲ್ಲಿ ಓರ್ವ ಜನಾರ್ದನ ಪೂಜಾರಿ ಅವರ ಎದೆಗೆ ತುಳಿದಿದ್ದಾನೆ. ಈ ವೇಳೆ ಅವರು ಸುಮಾರು 6 ಅಡಿ ಮೇಲಿನಿಂದ ಕೆಳಗಡೆ ಬಿದ್ದದ್ದಾರೆ.ಬಳಿಕ ಅವರ ಮೇಲೆ ಹಲ್ಲೆ ಮಾಡಿ ಕಾಲಿನಿಂದ ತುಳಿದು ಕೊಲೆಯನ್ನು ಮಾಡಲಾಗಿದೆ ಎಂದು ಪೊಲೀಸ್ ತನಿಖೆ ವೇಳೆ ಬಹಿರಂಗವಾಗಿದೆ.
ಬಂಧಿತರ ಮೇಲೆ ಈಗಾಗಲೇ ಹಲವು ಕ್ರಿಮಿನಲ್ ಕೇಸ್ ದಾಖಲಾಗಿದ್ದು,ಜಿ.ಕೆ. ರವಿಕುಮಾರ್ ಎಂಬಾತನ ಮೇಲೆ 2009 ರಲ್ಲಿ ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.
ಶರತ್ ಎಂಬಾತನ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣೆಯಲ್ಲಿ 2007 ರಲ್ಲಿ ಮನೆ ಕಳವು ಪ್ರಕರಣ, ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣೆಯಲ್ಲಿ 2022 ರಲ್ಲಿ ಸುಲಿಗೆ ಪ್ರಕರಣ ದಾಖಲಾಗಿದೆ.
ಆರೋಪಿ ವಿಜಯ ಕುಟಿನ್ಹಾ ಎಂಬಾತನ ಮೇಲೆ ಕೋಣಾಜೆ ಪೊಲೀಸ್ ಠಾಣೆಯಲ್ಲಿ 2022 ರಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.