ಬಂಟ್ವಾಳ; ರಾತ್ರಿ ಮಲಗಿದ್ದ ಯುವತಿ ಬೆಳಿಗ್ಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಬಂಟ್ವಾಳ: ಯುವತಿಯೋರ್ವಳು ಮಲಗಿದ್ದಲ್ಲೇ ಮೃತಪಟ್ಟ ಘಟನೆ ವಗ್ಗ ಸಮೀಪದ ಮದ್ವ ಎಂಬಲ್ಲಿ ನಡೆದಿದೆ.

ಕಾವಳಮೂಡುರು ಗ್ರಾಮದ ಪುಳಿಮಜಲು ನಿವಾಸಿ ರಾಜ ಅವರ ಪುತ್ರಿ ಮಿತ್ರ (23) ಮೃತಪಟ್ಟ ಯುವತಿ.

ರಾತ್ರಿ ಊಟ ಮಾಡಿ ಮಲಗಿದ ಯುವತಿ ಬೆಳಿಗ್ಗೆ ನೋಡುವಾಗ ಮೃತಪಟ್ಟ ಬಗ್ಗೆ ವರದಿಯಾಗಿದೆ.ಸಾವಿಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ.

ತಂದೆ ಮತ್ತು ಅಣ್ಣ ಇಬ್ಬರು ಬೆಂಗಳೂರಿನಲ್ಲಿ ಕೆಲಸದಲ್ಲಿರುವ ಕಾರಣ ತಾಯಿ ಮತ್ತು ಮಗಳು ಪ್ರಸ್ತುತ ಕಾವಳಪಡೂರು ಗ್ರಾಮದ ಮದ್ವ ಕಂಬಲಡ್ಡ ದೊಡ್ಡಮ್ಮನ ಮನೆಯಲ್ಲಿ ವಾಸವಾಗಿದ್ದರು.ರಾತ್ರಿ ಊಟ ಮಾಡಿ ಒಟ್ಟಿಗೆ ಮಲಗಿದ್ದವಳು ಬೆಳಿಗ್ಗೆ ಎದ್ದು ನೋಡುವಾಗ ಎದ್ದೇಳುವುದಿಲ್ಲ ಮಾತನಾಡುವುದಿಲ್ಲ ಎಂದು ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿದಾಗ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದಾರೆ.

ಬಳಿಕ ಮೃತದೇಹವನ್ನು ದೇರಳಕಟ್ಟೆ ಕೆ‌ಎಸ್.ಹೆಗ್ಡೆಯಲ್ಲಿ ಮರಣೋತ್ತರ ಪರೀಕ್ಷೆಗಾಗಿ ಕೊಂಡೊಯ್ಯಲಾಗಿದೆ. ಆರಂಭದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಹೇಳಲಾಗುತ್ತಿತ್ತು. ಆದರೆ ಬ್ರೈನ್ ಎಮರೇಜ್ ನಿಂದಲೂ ಸಾವು ಆಗಿರಬಹುದು ಎಂಬ ಸಂಶಯ ವ್ಯಕ್ತವಾಗಿದೆ.

ಮರಣೋತ್ತರ ಪರೀಕ್ಷೆ ಬಳಿಕ ಸಾವಿನ ಕಾರಣ ತಿಳಿದು ಬರಲಿದೆ. ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಸಹಜ ಸಾವು ಎಂದು ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್