ಬಂಟ್ವಾಳ; ಭಜರಂಗದಳದ ಕಾರ್ಯಕರ್ತ ಅನಾರೋಗ್ಯದಿಂದ ಸಾವು, ವೈದ್ಯರ ನಿರ್ಲಕ್ಷ್ಯ ಆರೋಪ

ಬಂಟ್ವಾಳ:ಬಜರಂಗದಳದ ಕಾರ್ಯಕರ್ತನೋರ್ವ ಅನಾರೋಗ್ಯದಿಂದ ಮೃತಪಟ್ಟ ಘಟನೆ ಮಣಿನಾಲ್ಕೂರು ಗ್ರಾಮದ ನೇಲ್ಯಪಲ್ಕೆ ಎಂಬಲ್ಲಿ ನಡೆದಿದೆ.

ನೇಲ್ಯಪಲ್ಕೆ ನಿವಾಸಿ ನಿತಿನ್ ಪೂಜಾರಿ(3೦) ಮೃತಪಟ್ಟ ಯುವಕ.‌ನಿತಿನ್ ಲಿವರ್ ಸಮಸ್ಯೆಯ ಹಿನ್ನೆಲೆಯಲ್ಲಿ ಮೂರು ದಿನಗಳಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ.ಆದರೆ ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.

ನಿತಿನ್ ಗೆ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಈ ವೇಳೆ ಲಿವರ್ ಸಮಸ್ಯೆಯ ಬಗ್ಗೆ ವೈದ್ಯರು ಹೇಳಿದ್ದಾರೆ.

ಖಾಸಗಿ ಬಸ್ಸು ಚಾಲಕರಾಗಿ ದುಡಿಯುತ್ತಿದ್ದ ರೂಪೇಶ್ ಅವರು ಅವಿವಾಹಿತರಾಗಿದ್ದರು.ಬಜರಂಗದಳ ಸಂಘಟನೆಗಳಲ್ಲಿ ಸಕ್ರೀಯರಾಗಿದ್ದರು.

ಇನ್ನು ಯುವಕನ ಸಾವಿನಲ್ಲಿ ವೈದ್ಯರ ನಿರ್ಲಕ್ಷ್ಯದ ಆರೋಪ ಕೇಳಿ ಬಂದಿದೆ.ಮೃತ ಯುವಕನ‌ ಶವವನ್ನು ಆಸ್ಪತ್ರೆ ಬಳಿ ಇಟ್ಟು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.

ನಕಲಿ ಮದ್ಯ ಸೇವಿಸಿ ಮಹಿಳೆ ಸೇರಿ ಐವರು ಮೃತ್ಯು

ಚೆನ್ನೈ;ನಕಲಿ ಮದ್ಯ ಸೇವಿಸಿ ಓರ್ವ ಮಹಿಳೆ ಸೇರಿದಂತೆ ಐವರು ಮೃತಪಟ್ಟಿರುವ ಘಟನೆ ತಮಿಳುನಾಡಿನ ವಿಲ್ಲುಪುರಂನಲ್ಲಿ ನಡೆದಿದೆ.

ಘಟನೆ ಸಂಬಂಧ ನಾಲ್ವರು ಪೊಲೀಸ್​ ಅಧಿಕಾರಿಗಳನ್ನು ಸೇವೆಯಿಂದ ಅಮಾನತು ಮಾಡಿ ಸಿಎಂ ಸ್ಟಾಲಿನ್ ಆದೇಶ ಹೊರಡಿಸಿದ್ದಾರೆ.

ಮೃತ ಐವರು ನಕಲಿ ಮದ್ಯ ಸೇವಿಸಿದ ಕಾರಣ ಶನಿವಾರ ತಡರಾತ್ರಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಇದರಲ್ಲಿ ಮೂವರು ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ.ಭಾನುವಾರ ಸಂಜೆ ಮಹಿಳೆ ಸೇರಿದಂತೆ ಇನ್ನಿಬ್ಬರು ಮೃತಪಟ್ಟಿದ್ದಾರೆ.

ಘಟನೆ ಸಂಬಂಧ ಓರ್ವನನ್ನು ವಶಕ್ಕೆ ಪಡೆಯಲಾಗಿದ್ದು, ಮತ್ತಷ್ಟು ಜನರ ಬಂಧನವಾಗುವ ಸಾಧ್ಯತೆ ಇದೆ ಎಂದು ಹಿರಿಯ ಪೊಲೀಸ್​ ಅಧಿಕಾರಿ ಒಬ್ಬರು ತಿಳಿಸಿದ್ಧಾರೆ.

ಟಾಪ್ ನ್ಯೂಸ್

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆ; ಮಕ್ಕಳು ಆಟವಾಡುವಾಗ ಆಕಸ್ಮಿಕವಾಗಿ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ

ನವದೆಹಲಿ; ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿರುವ ಶಾಕಿಂಗ್ ಘಟನೆ ರಾಷ್ಟ್ರ

Developed by eAppsi.com