ಬಂಟ್ವಾಳ; ಇನ್​​​ಸ್ಟಾಗ್ರಾಂನಲ್ಲಿ ಪರಿಚಯವಾದ ಬಾಲಕನಿಂದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಕೇಸ್ ದಾಖಲು

ಬಂಟ್ವಾಳ:ಬಾಲಕನೋರ್ವ ಇನ್​​​ಸ್ಟಾಗ್ರಾಂನಲ್ಲಿ ಪರಿಚಯವಾದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಬಂಟ್ವಾಳ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಬಾಲಕಿ ಬಂಟ್ವಾಳ ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದು,ಬಾಲಕನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಕೇಸ್ ದಾಖಲಿಸಲಾಗಿದೆ.

ಹತ್ತನೇ ತರಗತಿಯಲ್ಲಿ ಸಂತ್ರಸ್ತೆ ಓದುತ್ತಿದ್ದಳು.ಆಕೆಗೆ ಇನ್ಸ್ಟಾ ಗ್ರಾಂನಲ್ಲಿ ಬಾಲಕನ ಪರಿಚಯವಾಗಿತ್ತು.ಪರಿಚಯ ಪ್ರೀತಿಗೆ ತಿರುಗಿದ್ದು ಬಾಲಕ ಆಗಾಗ ಸಂತ್ರಸ್ತೆಯ ಮನೆಗೆ ಭೇಟಿ ಕೊಡುತ್ತಿದ್ದನು.

ಒಂದು ದಿನ ಬಾಲಕ ಸಂತ್ರಸ್ತೆಗೆ ಕರೆ ಮಾಡಿ ಸಂತ್ರಸ್ತೆಯ ಮನೆಗೆ ಬಂದಿದ್ದು,ಬಳಿಕ ಆಕೆ ಆತನ ಜೊತೆ ಸ್ಕೂಟರ್‌ನಲ್ಲಿ ತೆರಳಿದ್ದಾಳೆ.ಬಾಲಕ ಸಂತ್ರಸ್ತೆಗೆ ಲೈಂಗಿಕ ದೌರ್ಜನ್ಯ ಎಸಗಿ ಬಳಿಕ ಆಕೆಯನ್ನು ಮನೆಗೆ ಬಿಟ್ಟು ಹೋಗಿದ್ದಾನೆ ಎಂದು ವರದಿಯಾಗಿದೆ.

ಈ ಬಗ್ಗೆ ಸಂತ್ರಸ್ತ ಬಾಲಕಿಯ ಪೋಷಕರಿಗೆ ತಿಳಿಸಿದ್ದಾಳೆ. ಪೋಷಕರು ನೀಡಿದ ದೂರಿನಂತೆ, ಬಾಲಕನನ್ನು ಬಾಲನ್ಯಾಯ ಮಂಡಳಿಯ ಎದುರು ಹಾಜರುಪಡಿಸಿ, ರಿಮಾಂಡ್ ಹೋಂಗೆ ಕಳುಹಿಸಲಾಗಿದೆ.

ಟಾಪ್ ನ್ಯೂಸ್

ಜಗತ್ತಿನ ಅತ್ಯಂತ ದುಬಾರಿ ಬೆಲೆಯ ಕಾಫಿ ತಯಾರಿಸುವುದು ಪ್ರಾಣಿಯೊಂದರ ಮಲದಿಂದ!;ಅಚ್ಚರಿಯಾದರೂ ಇದು ವಾಸ್ತವ! ಈ ಕಾಫಿ ಬೆಲೆ ಎಷ್ಟಿದ ಗೊತ್ತಾ?

ಜಗತ್ತಿನ ಅತಿ ಬೆಲೆಯ ಕಾಫಿಯನ್ನು ಪ್ರಾಣಿಯೊಂದರ ಮಲದಿಂದ ತಯಾರಿಸುತ್ತಾರೆ ಎಂದರೆ ನೀವು ನಂಬಲೇ

ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ; ಅನುಮಾನ ವ್ಯಕ್ತಪಡಿಸಿದ ಪೋಷಕರು

ರಾಯಚೂರು:ಕಾಲೇಜು ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ ಬಗ್ಗೆ ಕುಟುಂಬ

ಮುತಾಲಿಕ್ ವಿರುದ್ಧ ಕಾರ್ಕಳದಲ್ಲಿ ಬಿಜೆಪಿ ಸ್ಪರ್ಧಿಯನ್ನು ಹಾಕಿದ್ರೆ ಚಿಕ್ಕಮಗಳೂರಿನಲ್ಲಿ ಸಿಟಿ ರವಿಗೂ ಸಮಸ್ಯೆ?

ಕಾರ್ಕಳ;ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್ ಕಾರ್ಕಳದಿಂದ ಚುನಾವಣೆಗೆ ಪಕ್ಷೇತರವಾಗಿ ಸ್ಪರ್ಧಿಸುವುದಾಗಿ ಹೇಳಿದ್ದು ಅವರ

Developed by eAppsi.com