ಬಂಟ್ವಾಳದಲ್ಲಿ ಅನೈತಿಕ ಪೊಲೀಸ್ ಗಿರಿ; ಪೊಲೀಸ್ ಸಿಬ್ಬಂದಿಯ ಮೇಲೆಯೇ ಹಲ್ಲೆ, ಇಬ್ಬರ ಬಂಧನ

ಬಂಟ್ವಾಳ;ಪೊಲೀಸ್ ಸಿಬ್ಬಂದಿಯ ಮೇಲೆ ಸಂಘಪರಿವಾರದ ಕಾರ್ಯಕರ್ತರು ಹಲ್ಲೆ ನಡೆಸಿ ಅನೈತಿಕ ಪೊಲೀಸ್ ಗಿರಿ ಮಾಡಿರುವ ಬಗ್ಗೆ ವರದಿಯಾಗಿದೆ‌.




ಪ್ರಕರಣಕ್ಕೆ ಸಂಬಂಧಿಸಿ ತುಂಬೆ ನಿವಾಸಿಗಳಾದ ಮನೀಶ್ ಪೂಜಾರಿ ಮತ್ತು ಮಂಜುನಾಥ್ ಆಚಾರ್ಯ ಎಂಬವರನ್ನು ಬಂಧಿಸಲಾಗಿದೆ.

ಬಂಟ್ವಾಳ ಡಿ.ವೈ.ಎಸ್.ಪಿ.ಕಚೇರಿಯ ಪೊಲೀಸ್ ಸಿಬ್ಬಂದಿ ಕುಮಾರ್ ಹನಮಂತಪ್ಪ ಅವರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ಈ ಬಗ್ಗೆ ದೂರು ನೀಡಿದ್ದು, ಅದರಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜು.27ರಂದು ರಾತ್ರಿ ಪತ್ನಿ ಹಾಗೂ ನಾದಿನಿ ಜೊತೆ ಬಿ.ಸಿ.ರೋಡಿನ ಹೊಟೇಲ್ ಒಂದರಲ್ಲಿ ಊಟ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಬಾರ್ ಒಂದರ ಮುಂಭಾಗದಲ್ಲಿ ನಿಂತುಕೊಂಡಿದ್ದ ಆರೋಪಿಗಳು ಕುಮಾರ್ ಕುಟುಂಬವನ್ನು ಹಿಂಬಾಲಿಸಿದ್ದಾರೆ.ಬಳಿಕ ಕುಮಾರ್ ಪತ್ನಿ ಮತ್ತು ನಾದಿನಿಯನ್ನು ವಸತಿಗೃಹದ ಬಳಿ ಬಿಟ್ಟು ಕರ್ತವ್ಯಕ್ಕೆ ಹಿಂತಿರುಗುತ್ತಿದ್ದಂತೆ ಬೈಕ್ ನಲ್ಲಿ ಬಂದ ಆರೋಪಿಗಳು ಅಡ್ಡಗಟ್ಟಿದ್ದಾರೆ.

ಆಗ ಕುಮಾರ್ ಅವರು ನಾನು ಪೊಲೀಸ್ ಎಂದು ಹೇಳಿದರೂ ಕೇಳದ ಆರೋಪಿಗಳು, ನೀನು ಪೊಲೀಸ್ ಅಲ್ಲ, ಇಲ್ಲಿನ ವಿಚಾರ ನಿನಗೆ ಗೊತ್ತಿಲ್ಲ ಎಂದು ಬೆದರಿಕೆ ಹಾಕಿ ಹಲ್ಲೆಗೆ ಮುಂದಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ವೇಳೆ ಕುಮಾರ್ ಅವರ ಪತ್ನಿಯ ವಿಡಿಯೋ ಚಿತ್ರೀಕರಣ ಮಾಡಿರುವ ಆರೋಪಿಗಳು ಅವರ ಮಾನಭಂಗಕ್ಕೆ ಯತ್ನಿಸಿದ್ದಾರೆ ಎಂದು ದೂರು ದಾಖಲಾಗಿದೆ.

ಸಧ್ಯ ಆರೋಪಿಗಳನ್ನು ಬಂಟ್ವಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ.




ಟಾಪ್ ನ್ಯೂಸ್

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೂಡಿ ಹಾಕಿ ಚಿತ್ರಹಿಂಸೆ; ವಿಧ್ಯಾಭ್ಯಾಸಕ್ಕೆಂದು ಕರೆದುಕೊಂಡು ಹೋಗಿ ಮನೆಗೆಲಸ ಮಾಡುವಂತೆ ಬಲವಂತ!

7 ತಿಂಗಳುಗಳಿಂದ ಬಾತ್ರೂಮ್​ನಲ್ಲಿ ಬಂಧಿಯಾಗಿದ್ದ 20 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಅಮೆರಿಕಾದ ಅಧಿಕಾರಿಗಳು