ಬಂಟ್ವಾಳ;ಬಂಟ್ವಾಳದ ಸವಾದ್ ಗೆ ಕೊಲೆ ಮಾಡಿ ಮೂಡಿಗೆರೆ
ಪ್ರವಾಸಿ ತಾಣ ದೇವರಮನೆ ಗಡ್ಡೆಯ ಬಳಿ ಸುಟ್ಟು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಟ್ವಾಳ ಮೂಲದ ರಿಜ್ವಾನ್ ಮತ್ತು ಝೈನುಲ್ಲಾ ಎಂಬುವವರು ಬಂಧಿತರು.ಪ್ರಕರಣದಲ್ಲಿ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಶವ ಪತ್ತೆ ಬಳಿಕ ಪ್ರಕರಣದ ತನಿಖೆ ಕೈಗೊಂಡಿದ್ದ ಮೂಡಿಗೆರೆ ವೃತ್ತ ನಿರೀಕ್ಷಕ ಸೋಮಶೇಖರ್ ಮತ್ತು ಬಣಕಲ್ ಎಸ್.ಐ. ಜಂಜೂರಾಜ್ ಮಹಾಜನ್ ನೇತೃತ್ವದ ಪೊಲೀಸ್ ತಂಡ ನಿನ್ನೆ ಆರೋಪಿಗಳನ್ನು ಗುರುವಾಯನಕೆರೆ ಎಂಬಲ್ಲಿ ಬಂಧಿಸಿ ಇಂದು ಮೂಡಿಗೆರೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ತನಿಖೆ ವೇಳೆ ಗಾಂಜಾ ವ್ಯವಹಾರಕ್ಕೆ ಸಂಬಂಧಿಸಿದಂತೆ ಗಲಾಟೆಯಾಗಿ ಸವಾದ್ ಗೆ ಪಡುಬಿದ್ರೆಯ ಬೆಂಗ್ರೆ ಎಂಬಲ್ಲಿ ಕೊಲೆ ಮಾಡಿ ಹೆಣವನ್ನು ತಂದು ದೇವರಮನೆ ಗುಡ್ಡದಲ್ಲಿ ಎಸೆದು ಹೋಗಿದ್ದರು ಎಂದು ತಿಳಿದು ಬಂದಿದೆ.
ಜೂನ್ 8 ರಂದು ದೇವರಮನೆ ಸಮೀಪ ರಸ್ತೆಯಂಚಿನಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿತ್ತು. ಆ ಬಳಿಕ ಬಂಟ್ವಾಳ ಮೂಲದ ಶವಾದ್ ಕುಟುಂಬ ಮಗನ ಮೃತದೇಹದ ಗುರುತು ಪತ್ತೆ ಮಾಡಿತ್ತು.
ಪ್ರಕರಣದ ಬೆನ್ನಲ್ಲೆ ಸಂತ್ರಸ್ತ ಯುವಕನ ಮನೆಗೆ ಸ್ಪೀಕರ್ ಖಾದರ್ ಭೇಟಿ ನೀಡಿ ಆರೋಪಿಗಳ ಪತ್ತೆಗೆ ಪೊಲೀಸರಿಗೆ ಸೂಚಿಸಿದ್ದರು.