ಬಂಟ್ವಾಳ; ಕಾರು ಢಿಕ್ಕಿಯಾಗಿ ಮಹಿಳೆ ಮೃತ್ಯು

ಬಂಟ್ವಾಳ: ಕಾರು ಢಿಕ್ಕಿಯಾಗಿ ಪಾದಚಾರಿ ಮಹಿಳೆ ಮೃತಪಟ್ಡ ಘಟನೆ ಬಂಟ್ವಾಳ ತಾಲೂಕಿನ ವಗ್ಗ ಎಂಬಲ್ಲಿ ನಡೆದಿದೆ.

ಬಂಟ್ವಾಳ ನಿವಾಸಿ ಸೇಸಮ್ಮ ಮೃತಪಟ್ಟ ಮಹಿಳೆ.ಸೇಸಮ್ಮ ಅವರು ಮನೆಯಿಂದ ವಗ್ಗ ಪೇಟೆಗೆ ನಡೆದುಕೊಂಡು ಬರುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಕಾರು ಡಿಕ್ಕಿಯಾಗಿದೆ.

ಸೇಸಮ್ಮ ಸ್ವಸಹಾಯ ಸಂಘದ ಹಣವನ್ನು ಪಾವತಿ ಮಾಡಲು ನಡೆದುಕೊಂಡು ಹೋಗುವಾಗ, ಮಂಗಳೂರಿನ ಕಡೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ವೈದ್ಯೆಯ ಕಾರು ಹಿಂದಿನಿಂದ ಸೇಸಮ್ಮ ಅವರಿಗೆ ಢಿಕ್ಕಿ ಹೊಡೆದಿದೆ.

ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಆದರೆ ದಾರಿ‌ಮಧ್ಯೆ ಸಾವನ್ನಪ್ಪಿದ್ದಾರೆ ಎಂದು ‌ವೈದ್ಯರು ತಿಳಿಸಿದ್ದಾರೆ.

ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಸೇಸಮ್ಮ ಅವರು ಬಡತನದಿಂದ ಜೀವನ ನಡೆಸುತ್ತಿದ್ದರು. ಇತ್ತೀಚೆಗೆ ಇವರ ಪತಿ ಕೂಡ ಇದೇ ರೀತಿ ಅಪಘಾತದಲ್ಲಿ ಮೃತಪಟ್ಟಿದ್ದರು ಎನ್ನಲಾಗಿದೆ.

ಟಾಪ್ ನ್ಯೂಸ್

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆ; ಮಕ್ಕಳು ಆಟವಾಡುವಾಗ ಆಕಸ್ಮಿಕವಾಗಿ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ

ನವದೆಹಲಿ; ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿರುವ ಶಾಕಿಂಗ್ ಘಟನೆ ರಾಷ್ಟ್ರ

Developed by eAppsi.com