ಬಂಟ್ವಾಳ; ಯುವ ವಕೀಲರ ಮೇಲೆ ಹಲ್ಲೆ ನಡೆಸಿದ ಪೊಲೀಸ್ ಅಧಿಕಾರಿಗೆ ತರಾಟೆಗೆ ತೆಗೆದುಕೊಂಡ ಹೈಕೋರ್ಟ್, 3 ಲಕ್ಷ ಪರಿಹಾರ ಕೊಡುವಂತೆ ಸೂಚನೆ

ಬಂಟ್ವಾಳ; ಯುವ ವಕೀಲ ಕುಲದೀಪ್‌ ಶೆಟ್ಟಿ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತ ವಕೀಲರಿಗೆ 3 ಲಕ್ಷ ರೂ ಪರಿಹಾರ ನೀಡುವಂತೆ ಪುಂಜಾಲಕಟ್ಟೆ ಪೊಲೀಸರಿಗೆ ಹೈಕೋರ್ಟ್‌ ಸೂಚನೆ ನೀಡಿದೆ.

ಸಿವಿಲ್ ಸ್ವರೂಪದ ವ್ಯಾಜ್ಯದಲ್ಲಿ ಮಧ್ಯಪ್ರವೇಶಿಸಿ ವಕೀಲರೊಬ್ಬರ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

ದಂಡದ ಮೊತ್ತವನ್ನು ತಪ್ಪಿತಸ್ಥ ಪೊಲೀಸರಿಂದ ವಸೂಲಿ ಮಾಡುವಂತೆ ಸರಕಾರಕ್ಕೆ ನಿರ್ದೇಶನ ನೀಡಿದೆ.ಪೊಲೀಸರ ನಡೆ ವಿರುದ್ಧ ನ್ಯಾಯಾಲಯ ತೀವ್ರ ತರಾಟೆಗೆ ತೆಗೆದುಕೊಂಡಿದೆ.

ಪುಂಜಾಲಕಟ್ಟೆಯ ಸಬ್‌ಇನ್ಸ್‌ಪೆಕ್ಟರ್ ಕೆ.ಪಿ. ಸುತೇಶ್ ತಮ್ಮ ಮೇಲೆ ಹಲ್ಲೆ ನಡೆಸಿದ್ದು, ಪ್ರಕರಣ ಸಂಬಂಧ ಹಲ್ಲೆ ಬಗ್ಗೆ ತನಿಖೆ ನಡೆಸಿ, ತಮಗೆ ಪರಿಹಾರ ನೀಡಲು ಮತ್ತು ಪ್ರಕರಣ ಕುರಿತು ಇಲಾಖಾ ವಿಚಾರಣೆ ನಡೆಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ವಕೀಲ ಕುಲದೀಪ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ, ವಕೀಲ ಕುಲದೀಪ್‌ಗೆ 3 ಲಕ್ಷ ರೂ.ಪರಿಹಾರ ನೀಡಬೇಕು.ಆ ಮೊತ್ತವನ್ನು ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವೇತನದಿಂದ ವಸೂಲಿ ಮಾಡಬೇಕು ಎಂದು ಆದೇಶಿಸಿದೆ.

ಟಾಪ್ ನ್ಯೂಸ್