ಬಂಟ್ವಾಳ: ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದ ಯುವಕನ ಮೇಲೆ ಹರಿದ ಲಾರಿ:ಯುವಕ ಮೃತ್ಯು

ಬಂಟ್ವಾಳ: ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದ ವೇಳೆ ಲಾರಿ ಹರಿದು ಯುವಕನೋರ್ವ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ಬಿ.ಸಿ.ರೋಡ್ ಸರ್ಕಲ್ ಬಳಿ ನಡೆದಿದೆ.

ಮೃತ ಯುವಕನನ್ನು ಬೆಂಗ್ರೆ ನಿವಾಸಿ ರಮೀಝ್ (20) ಎಂದು ಗುರುತಿಸಲಾಗಿದೆ. ಸ್ನೇಹಿತರಿಬ್ಬರು ಅಜಿಲಮೊಗರು ಉರೂಸ್ ಕಾರ್ಯಕ್ರಮಕ್ಕೆ ಬಂದವರು ಎಂದು ಹೇಳಲಾಗುತ್ತಿದೆ.

ಘಟನೆ ಬಳಿಕ ಲಾರಿ ಸಹಿತ ಪರಾರಿಯಾಗಿದ್ದ ಚಾಲಕನನ್ನು ಬಳಿಕ ಪೋಲೀಸರು ಪತ್ತೆ ಮಾಡಿದ್ದಾರೆ. ಘಟನೆಯಿಂದಾಗಿ ಕೆಲ ಹೊತ್ತು ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್