ಬಂಟ್ವಾಳ;ಮನೆ ಮೇಲೆ ಗುಡ್ಡೆ ಕುಸಿದು ಮೃತಪಟ್ಟ ಮಹಿಳೆಯ ಕುಟುಂಬಕ್ಕೆ ಪರಿಹಾರ ಘೋಷಿಸಿದ ಜಿಲ್ಲಾಧಿಕಾರಿ

ಬಂಟ್ವಾಳ:ತಾಲೂಕಿನ ಸಜೀಪಮುನ್ನೂರು ಗ್ರಾಮದ ನಂದಾವರ ಗುಂಪು ಮನೆಯಲ್ಲಿ ಮನೆಯೊಂದರ ಮೇಲೆ ಗುಡ್ಡ ಕುಸಿದು ಬಿದ್ದು, ಮನೆಯೊಳಗೆ ಸಿಲುಕಿ ಹಾಕಿಕೊಂಡಿದ್ದ ಇಬ್ಬರು ಮಹಿಳೆಯರ ಪೈಕಿ ಓರ್ವ ಮಹಿಳೆಯನ್ನು ರಕ್ಷಣೆ ಮಾಡಲಾಗಿದ್ದು, ಮತ್ತೋರ್ವ ಮಹಿಳೆ ಮೃತಪಟ್ಟ ಘಟನೆ ನಡೆದಿದೆ.

ನಂದಾವರ ನಿವಾಸಿ ಮಹಮ್ಮದ್ ಅವರ ಪತ್ನಿ ಝರೀನಾ(47) ಮೃತರು. ಮನೆಯೊಳಗೆ ಸಿಲುಕಿದ್ದ ಶಫಾ(20) ಅವರನ್ನು ತಕ್ಷಣ ರಕ್ಷಣೆ ಮಾಡಲಾಗಿದೆ.

ಗುಡ್ಡೆ ಕುಸಿದ ಬಳಿಕ ಕಾಲ ರಕ್ಷಣಾ ಕಾರ್ಯದಲ್ಲಿ ಸ್ಥಳೀಯರು ತೊಡಗಿದ್ದರು.ಸ್ಥಳಕ್ಕೆ ಭೇಟಿ ನೀಡಿದ ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.ಅದರಂತೆ ಮನೆ ದುರಸ್ಥಿ ಮಾಡಲು 1.20 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

ಇನ್ನು ಇಂತಹ ಘಟನೆಗಳು ಮರುಕಳಿಸದಂತೆ ತಾಲೂಕು ಅಧಿಕಾರಿಗಳು ಎಚ್ಚರವಹಿಸಬೇಕೆಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

ಟಾಪ್ ನ್ಯೂಸ್