ಬಂಟ್ವಾಳ; ರಿಕ್ಷಾ ಅಪಘಾತ, ಓರ್ವ ಮೃತ್ಯು

ಬಂಟ್ವಾಳ: ಕಾರು ಮತ್ತು ರಿಕ್ಷಾ ಢಿಕ್ಕಿಯಾಗಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ವಗ್ಗ ಸಮೀಪದ ಕಾಡಬೆಟ್ಟು ಕ್ರಾಸ್ ಎಂಬಲ್ಲಿ ನಡೆದಿದೆ.

ಮೃತ ರಿಕ್ಷಾ ಚಾಲಕನನ್ನು ಕೆಂಪು ಗುಡ್ಡೆ ನಿವಾಸಿ ವಿನಾಯಕ ಪೈ ಎಂದು ಗುರುತಿಸಲಾಗಿದೆ.

ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ವ್ಯಾಗನರ್ ಕಾರು ರಿಕ್ಷಾಕ್ಕೆ ಢಿಕ್ಕಿಯಾಗಿದೆ.

ಗಂಭೀರವಾಗಿ ಗಾಯಗೊಂಡ ವಿನಾಯಕ ಪೈ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಟಾಪ್ ನ್ಯೂಸ್