ಗುರುಪುರ: ಬೈಕ್ ಗೆ ಬಸ್ ಢಿಕ್ಕಿಯಾದ ಪರಿಣಾಮ
ಬೈಕ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಗುರುಪುರದಲ್ಲಿ ನಡೆದಿದೆ.
ಕೈರಂಗಳ ನಿವಾಸಿ ಅಣ್ಣಿ ಪೂಜಾರಿ ಎಂಬವರ ಮಗ ಸಂತೋಷ್ (38)ಮೃತರು.
ಸಂತೋಷ್ ಅವರು ವಾಮಂಜೂರಿನ ಬ್ಯಾಂಕ್ ಒಂದರಲ್ಲಿ ಉದ್ಯೋಗಿಯಾಗಿದ್ದು, ಮನೆಯಿಂದ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಗುರುಪುರದ ಬ್ಯಾಂಕ್ ಬಳಿ ಮೂಡುಬಿದಿರೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಬೈಕ್ ಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಈ ವೇಳೆ ರಸ್ತೆಗೆಸೆಯಲ್ಪಟ್ಟು ಸಂತೋಷ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಈ ಕುರಿತು ಬಜ್ಪೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಲೋಕಸಭೆ ಚುನಾವಣೆ; ವಿರೋಧಪಕ್ಷಗಳ ಒಗ್ಗೂಡುವಿಕೆಗೆ ಪಾಟ್ನಾದಲ್ಲಿ ವಿಪಕ್ಷಗಳ ಸಭೆ
ನವದೆಹಲಿ;ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು ವಿರೋಧಪಕ್ಷಗಳ ಒಗ್ಗೂಡುವಿಕೆಗೆ ಬಿಹಾರದ ಪಾಟ್ನಾದಲ್ಲಿ ನಡೆಯುತ್ತಿರುವ ವಿಪಕ್ಷಗಳ ಸಭೆ ಉತ್ತಮ ಆರಂಭ ಎಂದು ತೃಣಮೂಲ ಕಾಂಗ್ರೆಸ್ ವಿಶ್ಲೇಷಿಸಿದೆ.
ಪಾಟ್ನಾದ ಸಭೆಯಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾಬ್ಯಾನರ್ಜಿ, ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಶರದ್‍ಪವಾರ್, ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬ ಮುಸ್ತಿ, ಜಾರ್ಖಂಡ್‍ನ ಮುಖ್ಯಮಂತ್ರಿ ಹೇಮಂತ್ ಸೊರೆನ್, ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾಗವಹಿಸಲಿದ್ದಾರೆ ಎಂದು ವರದಿಯಾಗಿದೆ.
ಸಂವಿಧಾನ ರಕ್ಷಣೆ ಹಾಗೂ ದೇಶದ ಹಿತದೃಷ್ಟಿಯಿಂದ ಸಮಾನಮನಸ್ಕ ಪಕ್ಷಗಳ ಒಗ್ಗೂಡಿಕೆ ಅಗತ್ಯವಿದೆ. ಸಭೆಯಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.