ಬಂಟ್ವಾಳದ ಸವಾದ್ ಕೊಲೆ ಮಾಡಿ ದೇವರಮನೆ ಗುಡ್ಡೆಯಲ್ಲಿ ಎಸೆದ ಪ್ರಕರಣ; ಮತ್ತೆ ನಾಲ್ವರು ಆರೋಪಿಗಳ ಬಂಧನ

ಬಂಟ್ವಾಳ; ಸಾವದ್ ನನ್ನು ಕೊಲೆ ಮಾಡಿ ದೇವರಮನೆ ಸಮೀಪ ಗುಡ್ಡದಲ್ಲಿ ಸುಟ್ಟು ಹಾಕಿ ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ದಾವೂದ್ ಅಮೀರ್(25), ಅಬ್ದುಲ್ ರಹೀಜ್ (23), ಬಂಟ್ವಾಳದ ಕಾವಲ ಮೂಡೂರು ಗ್ರಾಮದ ಆಫ್ರಿದಿ(23), ಮಹಮ್ಮದ್ ಇರ್ಷಾದ್(20) ಎಂದು ಗುರುತಿಸಲಾಗಿದೆ.

ಈ ಮೊದಲು ಕೊಲೆಗೆ ಸಂಬಂಧಿಸಿದಂತೆ ಬಂಟ್ವಾಳ ಮೂಲದ ರಿಜ್ವಾನ್ ಮತ್ತು ಝೈನುಲ್ಲಾ ಎಂಬುವರನ್ನು ಬಂಧಿಸಲಾಗಿದ್ದು, ತಲೆಮರೆಸಿಕೊಂಡಿದ್ದ ನಾಲ್ವರನ್ನು ಭಾನುವಾರ ಬಂಧಿಸಲಾಗಿದೆ.

ಜೂನ್ 8 ರಂದು ದೇವರಮನೆ ಸಮೀಪ ರಸ್ತೆಯಂಚಿನಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿತ್ತು. ಆ ಶವ ತಮ್ಮ ಮಗನದೆಂದು ಬಂಟ್ವಾಳ ಮೂಲದ ಕುಟುಂಬ ಗುರುತಿಸಿತ್ತು.

ಗಾಂಜಾ ವ್ಯವಹಾರದಲ್ಲಿನ ಗಲಾಟೆ ಹಿನ್ನೆಲೆ ಪಡುಬಿದ್ರೆಯ ಬೆಂಗ್ರೆ ಎಂಬಲ್ಲಿ ಸಾವದ್ ನನ್ನು ಕೊಲೆ ಮಾಡಿ ಹೆಣವನ್ನು ತಂದು ದೇವರಮನೆ ಗುಡ್ಡದಲ್ಲಿ ಎಸೆದು ಹೋಗಿದ್ದರು.

ಇದೀಗ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದಾರೆ.

ಟಾಪ್ ನ್ಯೂಸ್