ಬಂಟ್ವಾಳ;ಸ್ಕೂಟರ್ ಗೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಬಂಟ್ವಾಳ ಸಮೀಪದ ರಾಯಿ ಎಂಬಲ್ಲಿ ನಡೆದಿದೆ.
ಬೈಪಾಸ್ ನಿವಾಸಿ ಚಂದ್ರಶೇಖರ ಮೃತರು.ಘಟನೆಯಲ್ಲಿ ಯೋಗೀಶ್ ಗಂಭೀರವಾಗಿ ಗಾಯಗೊಂಡಿದ್ದಾರೆ.ಸ್ಕೂಟರ್ ಸಿದ್ದಕಟ್ಟೆಯಿಂದ ಬಂಟ್ವಾಳ ಕಡೆ ಬರುತ್ತಿದ್ದ ವೇಳೆ ರಾಯಿ ಎಂಬಲ್ಲಿ ಹಿಂಬದಿಯಿಂದ ಬಂದ ಕಾರು ಡಿಕ್ಕಿಯಾಗಿದೆ.ಡಿಕ್ಕಿಯ ರಭಸಕ್ಕೆ ಸ್ಕೂಟರ್ ನ ಹಿಂಬದಿಯಲ್ಲಿದ್ದ ಚಂದ್ರಶೇಖರ ಅವರು ರಸ್ತೆಗೆ ಎಸೆಯಲ್ಪಟ್ಟು ಸಾವನ್ನಪ್ಪಿದ್ದಾರೆ.ಸವಾರ ಯೋಗೀಶ್ ಗಂಭೀರವಾಗಿದ್ದಾರೆ.
ಸ್ಥಳಕ್ಕೆ ಮೆಲ್ಕಾರ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.