ಬಂಟ್ವಾಳ:ಮನೆಯಿಂದ ಬೆಂಗಳೂರಿಗೆ ಎಂದು ಹೊರಟು ಹೋದ ಯುವಕನ ಮೃತದೇಹ ಮಂಗಳೂರಿನ ಪಣಂಬೂರಿನಲ್ಲಿ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ.
ಬಂಟ್ವಾಳ ಮೊಡಂಕಾಪು ನಿವಾಸಿ ಉಷಾ ಎಂಬವರ ಮಗ ವಿನಯ್(25) ಮೃತಪಟ್ಟ ಯುವಕ.
ಮಂಗಳೂರಿನ ಪಣಂಬೂರು ಬೀಚ್ ನ ಬ್ರೇಕ್ ವಾಟರ್ ಬಳಿ ಇಂದು ಯುವಕನ ಮೃತದೇಹ ಪತ್ತೆಯಾಗಿದೆ.ಪಣಂಬೂರು ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನು ವಿನಯ್ ಸಾವಿಗೆ ಕಾರಣ ತಿಳಿದು ಬಂದಿಲ್ಲ.ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.