ಸುದೀಪ್ ಪ್ರಚಾರಕ್ಕೆ ಬರುವುದು ಬೇಡ, ನನ್ನ ಕ್ಷೇತ್ರದಲ್ಲಿ ನಾನೇ ಆ್ಯಕ್ಟರ್, ಡೈರೆಕ್ಟರ್ -ಬಸನಗೌಡ ಪಾಟೀಲ್ ಯತ್ನಾಳ್ ಏನೆಲ್ಲಾ ಹೇಳಿದ್ರು?

ವಿಜಯಪುರ;ಬಿಜೆಪಿ ಪರ ಸುದೀಪ್ ಪ್ರಚಾರದ ಬಗ್ಗೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್,
ಚಿತ್ರನಟ ಸುದೀಪ್ ವಿಜಯಪುರಕ್ಕೆ ಪ್ರಚಾರಕ್ಕೆ ಬರುವುದು ಬೇಡ.ನಾನೇ ಅವರಿಗಿಂತ ಚೆನ್ನಾಗಿ ನಟನೆ ಮಾಡಿ ಹೆಚ್ಚು ಫೇಮಸ್ ಆಗಿದ್ದೇನೆ ಎಂದು ಹೇಳಿದ್ದಾರೆ.

ವಿಜಯಪುರಕ್ಕೆ ಪ್ರಚಾರಕ್ಕೆ ಮೋದಿ, ಅಮಿತ್ ಶಾ ಹಾಗೂ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಬರುತ್ತಾರೆ. ಯಾವುದೇ ಸಿನಿಮಾ ನಟರುಗಳು ನನಗೆ ಬೇಡ, ಚಿತ್ರ ನಟರಿಗಿಂತಲೂ ನಾನೇನು ಕಡಿಮೆ ಇಲ್ಲ.ಡೈರೆಕ್ಟರ್, ಆಕ್ಟಿಂಗ್, ಕಥಾ ಸಂಕಲನ ನಾನೇ ಮಾಡುತ್ತೀನಿ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಈ ಮೊದಲು ನಾನು ಮುಸ್ಲಿಮರ ಮತಗಳು ಬೇಡ ಎಂದು ಹೇಳಿದ್ದೆ.ಹಿಂದೂಗಳ ಮತಗಳೇ ನನಗೆ ಸಾಕು.ಆ ಹೇಳಿಕೆಯನ್ನು ನಾನು ವಾಪಸ್ ಪಡೆಯುವುದಿಲ್ಲ.ಈಗಲೂ ಆ ಹೇಳಿಕೆಗೆ ನಾನು ಬದ್ಧವಾಗಿದ್ದೇನೆ ಎಂದು ಹೇಳಿದ್ದಾರೆ.

ಜಗದೀಶ ಶೆಟ್ಟರ್, ಲಕ್ಷ್ಮಣ ಸವದಿಗೆ ಬಿಜೆಪಿ ಎಲ್ಲವನ್ನೂ ಕೊಟ್ಟಿತ್ತು. ಟಿಕೆಟ್ ಕೈ ತಪ್ಪಿದ ಕಾರಣ ಪಕ್ಷಕ್ಕೆ ದ್ರೋಹ ಬಗೆಯಬಾರದು. ಹಿಂದೆ ನನಗೂ ಟಿಕೆಟ್ ಕೈತಪ್ಪಿತ್ತು. ಆದರೆ ನಾನು ಪಕ್ಷ ಬಿಟ್ಟಿರಲಿಲ್ಲ. ಪಕ್ಷದಿಂದ ಉಚ್ಚಾಟನೆ ಮಾಡಿದ ಮೇಲೆ ಅನಿವಾರ್ಯವಾಗಿ ಜೆಡಿಎಸ್‌ಗೆ ಹೋಗಿದ್ದೆ. ಅಲ್ಲಿಯ ವಾತಾವರಣ ನೋಡಿ ವಿಜಯಪುರ-ಬಾಗಲಕೋಟೆ ಎಂಎಲ್‌ಸಿಗೆ ಪಕ್ಷೇತರನಾಗಿ ನಿಂತು ಗೆದ್ದಿರುವೆ. ಅದನ್ನು ಮಾಡಬೇಕಾಗಿತ್ತು. ಕಾಂಗ್ರೆಸ್ ಸೇರಿ ಬಿಜೆಪಿಗೆ ದ್ರೋಹ ಬಗೆದಿದ್ದೀರಿ ಎಂದು ಹೇಳಿದರು.

ಟಾಪ್ ನ್ಯೂಸ್

ಯುಎಇಯಲ್ಲಿ ಲುಲು ಯೂಸುಫ್ ಅಲಿಯ ಸಹೋದರನ ಪುತ್ರಿಯ ವಿವಾಹ; 4 ದಿನಗಳ ಕಾಲ ನಡೆದ ವಿವಾಹದಲ್ಲಿ 1000ಕ್ಕೂ ಅಧಿಕ ಸೆಲೆಬ್ರಿಟಿಗಳು ಭಾಗಿ, ಈ ವರ್ಷ ಯುಎಇಯಲ್ಲಿ ನಡೆದ ಅತಿದೊಡ್ಡ ಮದುವೆಯ ಸಿದ್ದತೆ ಹೇಗಿತ್ತು ಗೊತ್ತಾ?

ಯುಎಇ ನಿವಾಸಿಗಳು ವಾರಾಂತ್ಯದಲ್ಲಿ ಅಬುಧಾಬಿಯಲ್ಲಿ ಅತಿರಂಜಿತ ಸಮಾರಂಭ ಮತ್ತು ವರ್ಷದ ಅತಿದೊಡ್ಡ ವಿವಾಹ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

Developed by eAppsi.com