ಮುಂದಿನ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮದರಸಾ ಬಂದ್ ಮಾಡುತ್ತೇವೆ-ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ

ಬೆಳಗಾವಿ:ಮುಂದಿನ ಬಾರಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮದರಸಾ ಸಂಪೂರ್ಣ ಬಂದ್ ಮಾಡುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ‌ ಕೊಟ್ಟಿದ್ದಾರೆ.

ಬೆಳಗಾವಿಯಲ್ಲಿ ಶಿವಚರಿತ್ರೆ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಮುಂದಿನ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದರೆ ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ ಶರ್ಮಾ ರೀತಿ ಕರ್ನಾಟಕದಲ್ಲಿ ಮದರಸಾ ಬಂದ್ ಮಾಡುತ್ತೇವೆ ಎಂದು ಹೇಳಿದ್ದಾರೆ.

ಇವತ್ತು ನಾನು ಬಸನಗೌಡ ಪಾಟೀಲ್ ಯತ್ನಾಳ್ ಆಗಿ ಉಳಿಯಲು ಶಿವಾಜಿ ಮಹಾರಾಜರು ಕಾರಣರಾಗಿದ್ದಾರೆ. ಇಲ್ಲವಾದರೆ ನಾನು ಬಶೀರ್ ಅಹ್ಮದ್ ಪಟೇಲ್ ಆಗಿರುತ್ತಿದ್ದೆ. ಅದೇ ರೀತಿ ಅಭಯ್ ಪಾಟೀಲ್, ಅಜರುದ್ದೀನ್ ಪಟೇಲ್ ಆಗಿ ಇರುತ್ತಿದ್ದರು ಎಂದರು.

ಅಸ್ಸಾಂ ಹಿಂದೂಸ್ತಾನ ಬಿಟ್ಟು ಹೋಗುವ ವಾತಾವರಣ ಇತ್ತು. ಆದರೆ ಹಿಮಂತ ಬಿಸ್ವಾ ಶರ್ಮಾರಿಂದ ಅಸ್ಸಾಂನಲ್ಲಿ ಹಿಂದೂಗಳು ಜೀವನ ಮಾಡಲು ಸಾಧ್ಯವಾಯಿತು ಎಂದರು.

ಟಾಪ್ ನ್ಯೂಸ್

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ; ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿದ ಆಟೋ ಚಾಲಕ; ಕೃತ್ಯವನ್ನು

ಮುಸ್ಲಿಮರ ವಿವಾಹ ನೋಂದಣಿಗೆ ವಕ್ಫ್ ಮಂಡಳಿಗೆ ಅನುಮತಿ ನೀಡಿದ ರಾಜ್ಯ ಸರಕಾರ; ವಿವಾಹ ಸರ್ಟಿಫಿಕೇಟ್ ಪಡೆಯಲು ನೀವು ಏನು ಮಾಡಬೇಕು? ಇಲ್ಲಿದೆ ಮಾಹಿತಿ…

ಮಂಗಳೂರು;ಮುಸ್ಲಿಮ್ ಜೋಡಿಯ ವಿವಾಹ ನೋಂದಣಿ ಮಾಡಲು ರಾಜ್ಯ ವಕ್ಫ್ ಮಂಡಳಿಗೆ ರಾಜ್ಯ ಸರ್ಕಾರ

Developed by eAppsi.com