ಮದುವೆ ವೇದಿಕೆ ಮೇಲೆ ಆಸಿಡ್ ದಾಳಿ, ವಧು-ವರ, ಸೇರಿ ಕುಟುಂಬಸ್ಥರಿಗೆ ಗಂಭೀರ ಗಾಯ

ಮದುವೆ ವೇದಿಕೆ ಮೇಲೆ ಆಸಿಡ್ ದಾಳಿ, ವಧು-ವರ, ಸೇರಿ ಕುಟುಂಬಸ್ಥರಿಗೆ ಗಂಭೀರ ಗಾಯ

ಬಸ್ತಾರ್:ಮದುವೆ ವೇದಿಕೆಯ ಮೇಲೆ ಅಪರಿಚಿತ ದುಷ್ಕರ್ಮಿಗಳು ಆಸಿಡ್ ಎಸೆದ ಪರಿಣಾಮ ವಧು-ವರರು ಸೇರಿದಂತೆ 12 ಮಂದಿ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ಬಸ್ತಾರ್‌ನಲ್ಲಿ ಬುಧವಾರ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯ ಚೋಟೆ ಅಂಬಲ್ ಪ್ರದೇಶದಲ್ಲಿ ಏರ್ಪಡಿಸಲಾಗಿದ್ದ ಮದುವೆ ಸಮಾರಂಭದಲ್ಲಿ ಸಂಜೆ 7 ಗಂಟೆ ಸುಮಾರಿಗೆ ದಾಳಿ ನಡೆದಿದೆ.

ದುಷ್ಕರ್ಮಿಗಳು ದಾಳಿ ನಡೆಸಿದಾಗ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ದಾಳಿಗೆ ಸಂಬಂಧಿಸಿದಂತೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡ ಸಂತ್ರಸ್ತರನ್ನು ಚಿಕಿತ್ಸೆಗಾಗಿ ಭಾನಪುರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದ್ದು, ನಂತರ ಅವರನ್ನು ಮಹಾರಾಣಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ದಾಳಿಕೋರನನ್ನು ಗುರುತಿಸಲು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಛೋಟೆ ಅಮಾಬಲ್ ಪ್ರದೇಶದಲ್ಲಿ ಆಯೋಜಿಸಿದ್ದ ಮದುವೆ ಸಮಾರಂಭದಲ್ಲಿ ಸಂಜೆ 7 ಗಂಟೆ ಸುಮಾರಿಗೆ ವಿದ್ಯುತ್ ವ್ಯತ್ಯಯ ಉಂಟಾಗಿತ್ತು.

ಮದುವೆ ಮುಂದುವರಿಸಲು ಸಂಬಂಧಿಕರು ವಿದ್ಯುತ್ ಕಲ್ಪಿಸಲು ಹರಸಾಹಸ ಪಡುತ್ತಿದ್ದಂತೆ, ಮದುವೆಯ ಅತಿಥಿಗಳ ನಡುವೆ ಇದ್ದ ದುಷ್ಕರ್ಮಿಯು ವೇದಿಕೆಯಲ್ಲಿದ್ದವರ ಮೇಲೆ ಆಸಿಡ್ ಎರಚಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳನ್ನು ಉಲ್ಲೇಖಿಸಿ ಪೊಲೀಸರು ತಿಳಿಸಿದ್ದಾರೆ.

ಆ್ಯಸಿಡ್ ದಾಳಿಯಲ್ಲಿ ವಧು-ವರನಿಗೆ, ಅವರ ಸಂಬಂಧಿಕರಿಗೆ ಸುಟ್ಟಗಾಯಗಳಾಗಿದ್ದರಿಂದ ಸ್ಥಳದಲ್ಲಿ ಭಾರೀ ಕೂಗು ಕೇಳಿ ಬಂದಿದೆ.ಗಾಯಾಳುಗಳನ್ನು ತಕ್ಷಣ ಭಾನಪುರಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು. ಪ್ರಥಮ ಚಿಕಿತ್ಸೆ ನೀಡಿದ ನಂತರ, ವೈದ್ಯರು ಗಾಯಾಳುಗಳನ್ನು ಮುಂದಿನ ಚಿಕಿತ್ಸೆಗೆ ಮಹಾರಾಣಿ ಆಸ್ಪತ್ರೆಗೆ ಶಿಫಾರಸು ಮಾಡಿದರು.ಮಾಹಿತಿಯ ಮೇರೆಗೆ ಪೊಲೀಸರು ಚೋಟೆ ಅಂಬಲ್‌ನಲ್ಲಿರುವ ಮದುವೆ ಸ್ಥಳಕ್ಕೆ ಧಾವಿಸಿದರು. ಆ್ಯಸಿಡ್ ದಾಳಿಯಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿದರು. ಕತ್ತಲಾಗಿದ್ದರಿಂದ ದಾಳಿಯ ಹಿಂದಿನ ಆರೋಪಿಯನ್ನು ಗುರುತಿಸುವುದು ಸವಾಲಾಗಿ ಪರಿಣಮಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭಾನಪುರಿ ಉಪ ವಿಭಾಗೀಯ ಪೊಲೀಸ್ ಅಧಿಕಾರಿ (ಎಸ್‌ಡಿಒಪಿ) ಘನಶ್ಯಾಮ್ ಕಾಂಬ್ಡೆ ಅವರು ಪ್ರಕರಣವನ್ನು ದಾಖಲಿಸಿಕೊಂಡಿದ್ದು ಈ ಕುರಿತು ಮುಂದಿನ ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com