ಗುಜರಾತ್ ಗಲಭೆ ಕುರಿತ ಸಾಕ್ಷ್ಯಚಿತ್ರ ಮಾಡಿ ಚರ್ಚೆಗೆ ಗ್ರಾಸವಾಗಿದ್ದ ಬಿಬಿಸಿ ಕಚೇರಿ ಮೇಲೆ ಐಟಿ ದಾಳಿ

ನವದೆಹಲಿ:ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದೆಹಲಿ ಹಾಗೂ ಮುಂಬೈಯಲ್ಲಿರುವ ಬಿಬಿಸಿ ಕಚೇರಿ‌ ಮೇಲೆ ದಾಳಿ ನಡೆಸಿದೆ.

ಬಿಬಿಸಿ ಕಚೇರಿ ಸಿಬ್ಬಂದಿಗಳ ಪೋನ್ ಜಪ್ತಿ ಮಾಡಿದ್ದು, ತೆರಿಗೆ ವಂಚನೆ ಕುರಿತು 20 ಅಧಿಕಾರಿಗಳ ತಂಡ ಶೋಧ ನಡೆಸಿದೆ ಎನ್ನಲಾಗಿದೆ.

ಕಂಪನಿಯ ವ್ಯವಹಾರ ಕಾರ್ಯಾಚರಣೆಗಳಿಗೆ ಸಂಬಂಧಿಸಿದ ದಾಖಲೆಗಳು ಮತ್ತು ಅದರ ಭಾರತೀಯ ವಿಭಾಗಕ್ಕೆ ಸಂಬಂಧಿಸಿದ ದಾಖಲೆಗಳನ್ನು ಇಲಾಖೆ ಪರಿಶೀಲಿಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುಜರಾತ್‌ ಗಲಾಭೆ ಬಗ್ಗೆ ಸಾಕ್ಷ್ಯಚಿತ್ರ ಮಾಡಿದ್ದ ಬಿಬಿಸಿ ಕೇಂದ್ರ ಸರಕಾರದ ಕೆಂಗಣ್ಣಿಗೆ ಗುರಿಯಾಗಿತ್ತು.ಇದೀಗ ಐಟಿ ದಾಳಿ ಮಾಡಿದ್ದು ಪ್ರತಿಪಕ್ಷಗಳ ಭಾರೀ ಟೀಕೆಗೆ ಕಾರಣವಾಗಿದೆ.

ಟಾಪ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆ;ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದೇಕೆ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು;ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ

Developed by eAppsi.com