ಬೆಳ್ತಂಗಡಿ:ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಧರ್ಮಸ್ಥಳ ಘಟಕದ ಚಾಲಕ ಗೋಳಿತೊಟ್ಟು ನಿವಾಸಿ ಅಶೋಕ್ ಕುಮಾರ್(37) ಮೃತರು.ಇವರು ಕೆಎಸ್ಸಾರ್ಟಿಸಿ ಚಾಲಕರಾಗಿದ್ದರು.
ಮೇ.18 ರಂದು ಬೆಳಗ್ಗೆ ಕರ್ತವ್ಯ ಮುಗಿಸಿ ಬೈಕಿನಲ್ಲಿ ತಮ್ಮ ಮನೆಗೆ ತೆರಳುತ್ತಿದ್ದಾಗ ಕೊಕ್ಕಡ ಸಮೀಪದ ಕುಡಲ್ ಎಂಬಲ್ಲಿ ಅವರು ಚಲಾಯಿಸುತ್ತಿದ್ದ ಬೈಕ್‌ಗೆ ಕಾರು ಢಿಕ್ಕಿ ಹೊಡೆದು ತಲೆಗೆ ತೀವ್ರವಾಗಿ ಗಾಯವಾಗಿತ್ತು.
ಗಂಭೀರವಾಗಿದ್ದ ಅಶೋಕ್ ಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.ಆದರೆ ಜೀವನ್ಮರಣ ಸ್ಥಿತಿಯಲ್ಲಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮೃತರು ಪತ್ನಿ, ಇಬ್ಬರು ಪುತ್ರಿಯರು, ತಂದೆ ಹಾಗೂ ತಾಯಿಯನ್ನು ಅಗಲಿದ್ದಾರೆ.