ಬೆಳ್ತಂಗಡಿ:ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿಯಾಗಿ ಆಟೋ ರಿಕ್ಷಾ ಪಲ್ಟಿಯಾಗಿ ಮಗು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯಲ್ಲಿ ನಡೆದಿದೆ.
ಕಾರ್ಕಳದ ಸಂತೋಷ್ ಹಾಗೂ ಗೀತಾ ದಂಪತಿಯ ಒಂದು ವರ್ಷದ ಮಗು ಮೃತಪಟ್ಟಿದೆ.
ದಂಪತಿ ಮಗುವಿನ ಜೊತೆ ಸಂಬಂಧಿಕರ ಮನೆಗೆಂದು ರಿಕ್ಷಾದಲ್ಲಿ ಹೋಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಸೇತುವೆಗೆ ಢಿಕ್ಕಿ ಹೊಡೆದು ಮಗುಚಿ ಬಿದ್ದಿದೆ.ಈ ವೇಳೆ ಮಗು ರಸ್ತೆಗೆಸೆಯಲ್ಪಟ್ಟು ಮೃತಪಟ್ಟಿದೆ.
ಈ ಕುರಿತು ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.