ಬೆಳ್ತಂಗಡಿ; ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ, ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ;ಬಿಜೆಪಿಯ ವಿಜಯೋತ್ಸವದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿ‌ ಬಂದಿದೆ.

ಹಲ್ಲೆಗೊಳಗಾದ ವ್ಯಕ್ತಿ ಕಾಂಗ್ರೆಸ್ ಕಾರ್ಯಕರ್ತ ದಯಾನಂದ ಪೂಜಾರಿ ಎಂದು ಗುರುತಿಸಲಾಗಿದೆ.ಪೆರಾಡಿಯಲ್ಲಿ ಬಿಜೆಪಿಯ ವಿಜಯೋತ್ಸವದಲ್ಲಿ ಹಲ್ಲೆ ನಡೆಸಿದ್ದಾರೆಂದು ಕಾಂಗ್ರೆಸ್ ಕಾರ್ಯಕರ್ತ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಿಜೆಪಿಯ ವಿಜಯೋತ್ಸವ ಮೆರವಣಿಗೆಯ ಒಳಗೆ ಇವರನ್ನು ಎಳೆದುಕೊಂಡು ಹೋಗಿ ಹಲ್ಲೆ ಮಾಡಿರುವುದಾಗಿ ಆರೋಪಿಸಲಾಗಿದ್ದು ಹಲ್ಲೆಗೆ ಒಳಗಾದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ಬಗ್ಗೆ ಮಾಹಿತಿ ತಿಳಿದು ಮಾಜಿ ಶಾಸಕ ವಸಂತ ಬಂಗೇರ, ರಕ್ಷಿತ್ ಶಿವರಾಂ ಸೇರಿದಂತೆ ಹಲವರು ಮುಖಂಡರು, ಕಾಂಗ್ರೆಸ್ ಕಾರ್ಯಕರ್ತರು ಆಸ್ಪತ್ರೆಗೆ ಭೇಟಿ ನೀಡಿ ವಿಚಾರಿಸಿದ್ದಾರೆ.ಘಟನೆಯ ಬಗ್ಗೆ ವೇಣೂರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ದ.ಕ.ಜಿಲ್ಲೆಯ ಜನತೆ ಕಾಂಗ್ರೆಸ್‌ನ ಗ್ಯಾರಂಟಿಯನ್ನು ತಿರಸ್ಕರಿಸಿದ್ದಾರೆ-ವೇದವ್ಯಾಸ ಕಾಮತ್

ಮಂಗಳೂರು; ದ.ಕ.ಜಿಲ್ಲೆಯ ಜನತೆ ಕಾಂಗ್ರೆಸ್‌ನ ಗ್ಯಾರಂಟಿಯನ್ನು ತಿರಸ್ಕರಿಸಿದ್ದಾರೆ ಎಂದು ಮಂಗಳೂರು ನಗರ ದಕ್ಷಿಣ ಕೇತ್ರದ ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.

ಈ ಮೊದಲು 2013ರಲ್ಲಿ ಕಾಂಗ್ರೆಸ್ ನೀಡಿದ್ದ ಭರಸೆಗಳನ್ನು ಈಡೇರಿಸಲಿಲ್ಲ. ಈ ಬಾರಿಯೂ ಅವರು ನೀಡಿರುವ ಭರವಸೆಗಳನ್ನು ಈಡೇರಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ನೀಡಿರುವ ಭರವಸೆಗಳನ್ನು ಅನುಷ್ಠಾನಗೊಳಿಸಲು ಶ್ರಮಿಸಲಿ ನಾವು ಅದಕ್ಕೆ ಪೂರ್ಣ ಸಹಕಾರ ನೀಡುತ್ತೇನೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಘಟಾನುಘಟಿ ನಾಯಕರ ಸೋಲಿಗೆ ಕಾಂಗ್ರೆಸ್‌ನ ನಾಯಕರು ಸುಳ್ಳು ಹೇಳಿ ಜನರನ್ನು ನಂಬಿಸಿದ್ದು ಮತ್ತು ಗ್ಯಾರಂಟಿ ಸ್ಕೀಮ್ ಕಾರಣವಾಗಿದೆ ಎಂದು ಇದೇ ವೇಳೆ ಕಾಮತ್ ಹೇಳಿದ್ದಾರೆ.

ಟಾಪ್ ನ್ಯೂಸ್

ಪ್ರವೀಣ್ ನೆಟ್ಟಾರು ಪತ್ನಿಗೆ ತೋರಿದ ಮಾನವೀಯತೆ ಫಾಝಿಲ್ & ಮಸೂದ್ ಕುಟುಂಬಕ್ಕೆ ತೋರಿಸುತ್ತಾರ ಸಿದ್ದರಾಮಯ್ಯ?ಬಿಜೆಪಿ ಅವಧಿಯಲ್ಲಿ ಹತ್ಯೆಯಾದ ಯುವಕರಿಬ್ಬರ ಕುಟುಂಬಕ್ಕೆ ಪರಿಹಾರ ಕೊಡಿಸುವಲ್ಲಿ‌ ಕಾಂಗ್ರೆಸ್ಸಿಗರು ಮೌನ?

BIG NEWS ತೀವ್ರಗೊಂಡ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆ, ನೂತನ ಸಂಸತ್ ಭವನಕ್ಕೆ ಮೆರವಣಿಗೆ ತೆರಳಲು ಯತ್ನ; ಸಾಕ್ಷಿ ಮಲಿಕ್, ವಿನೇಶ್ ಪೋಗಟ್ ಸೇರಿ ಹಲವರು ವಶಕ್ಕೆ

ನವದೆಹಲಿ;ನೂತನ ಸಂಸತ್​ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸುತ್ತಿದ್ದ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿದ್ದಾರೆ.

Developed by eAppsi.com