ಬೆಳ್ತಂಗಡಿ:ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾದ ಗ್ರಾಮ ಪಂಚಾಯಿತಿ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.
ನಾಗೇಶ್ ಅಮಾನತಾದ ಉಜಿರೆ ಗ್ರಾಮ ಪಂಚಾಯತ್ ಸಿಬ್ಬಂದಿ.
ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಉಜಿರೆಯ ಗ್ರಾಮ ಪಂಚಾಯಿತಿ ಸಿಬ್ಬಂದಿ ನಾಗೇಶ್ ಗೆ ಅಮಾನತುಗೊಳಿಸಿ ಪಿಡಿಓ ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಚುನಾವಣಾ ಪ್ರಚಾರ ಹಾಗೂ ವಿಜಯೋತ್ಸವದಲ್ಲಿ ಪಂಚಾಯಿತಿ ಸಿಬ್ಬಂದಿ ನಾಗೇಶ್ ಬಿಜೆಪಿ ಬಾವುಟ ಹಿಡಿದು ತಿರುಗುವ ವಿಡಿಯೋ ವೈರಲ್ ಆಗಿತ್ತು. ಈ ಹಿನ್ನೆಲೆ ಸೇವೆಯಿಂದ ಅಮಾನತು ಮಾಡಿ ಪಿಡಿಓ ಪ್ರಕಾಶ್ ಶೆಟ್ಟಿ ಆದೇಶ ಹೊರಡಿಸಿದ್ದಾರೆ.
ಹರೀಶ್ ಪೂಂಜಾ ವಿರುದ್ಧ ಮಾನನಷ್ಟ ಮೊಕದ್ದಮೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರನ್ನು ಕೊಲೆ ಮಾಡಿಸಿದ್ದಾರೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಕಾಂಗ್ರೆಸ್ ನಿರ್ಧರಿಸಿದೆ.
ಬೆಳ್ತಂಗಡಿಯಲ್ಲಿ ನಡೆದ ಬಿಜೆಪಿ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಹರೀಶ್ ಪೂಂಜಾ ಅವರು, 24 ಹಿಂದೂ ಕಾರ್ಯಕರ್ತರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹತ್ಯೆ ಮಾಡಿಸಿದ್ದಾರೆಂದು ಹೇಳಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಕೂಡ ವೈರಲ್ ಆಗಿತ್ತು.ಆ ಬಳಿಕ ವಿವಿಧ ಠಾಣೆಯಲ್ಲಿ ಕೇಸ್ ಕೂಡ ದಾಖಲಾಗಿತ್ತು.