ಬೆಳ್ತಂಗಡಿ;ಬೆಳ್ತಂಗಡಿ ತಾಲೂಕಿನ ಬಜಿರೆ ಗ್ರಾಮದ ಬಾಡಾರು ಕೊರಂಗಲ್ಲುವಿನಲ್ಲಿ ಕೊರಗಜ್ಜನ ಗುಡಿಗೆ ಬೆಂಕಿಯಿಟ್ಟಿರುವ ಘಟನೆ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ.
ಹರೀಶ್ ಪೂಜಾರಿ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ.
ಬಜಿರೆ ಗ್ರಾಮದ ಕೊರಗಕಲ್ಲು ಸ್ವಾಮಿ ಕೊರಗಜ್ಜ ಚಪ್ಪರಕ್ಕೆ ಬೆಂಕಿ ಕೊಟ್ಟು ಹಾನಿ ಉಂಟು ಮಾಡಿದ ಆರೋಪದಲ್ಲಿ ವೇಣೂರು ಪೊಲೀಸರು ಐವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಓರ್ವನನ್ನು ಬಂಧಿಸಿದ್ದಾರೆ.
ಕೊರಗಕಲ್ಲು ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಬಾಡಾರು ಅಧ್ಯಕ್ಷ ಪ್ರದೀಪ್ ಕುಮಾರ್ ಹೆಗ್ಡೆ ನೀಡಿದ ದೂರಿನ ಮೇರೆಗೆ ಓರ್ವನ ಬಂಧನ ನಡೆದಿದೆ ಎಂದು ವರದಿಯಾಗಿದೆ.