ಬೆಳ್ತಂಗಡಿ: ಯುವಕನೊಬ್ಬ ಮನೆಯಲ್ಲೇ ಹೃದಯಾಘಾತವಾಗಿ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕಿರ್ನಡ್ಕದಲ್ಲಿ ನಡೆದಿದೆ.
ಮೃತ ಯುವಕನನ್ನು ಕಿರ್ನಡ್ಕ ನಿವಾಸಿ ಕಿಟ್ಟಣ್ಣ ನಾಯ್ಕ ಮತ್ತು ವೇದಾವತಿ ದಂಪತಿಯ ಪುತ್ರ ಪ್ರದೀಪ್ (25) ಎಂದು ಗುರುತಿಸಲಾಗಿದೆ.
ಹೃದಯಾಘಾತವಾದ ತಕ್ಷಣವೇ ಉಜಿರೆ ಖಾಸಗಿ ಆಸ್ಪತ್ರೆಗೆ ಅವರಿಗೆ ದಾಖಲಿಸಲಾಗಿದೆ.ಅದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ.
ಪ್ರದೀಪ್ ಸಹೋದರಿ ಪದ್ಮಾವತಿ, ಸಹೋದರ ನಿತೇಶ್ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.