ಬೆಳ್ತಂಗಡಿ:ಪಿಕಪ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಬಾಲಕನೋರ್ವ ಮೃತಪಟ್ಟ ಘಟನೆ ಲಾಯಿಲದಲ್ಲಿ ನಡೆದಿದೆ.
ಅರ್ತಿಲ ನಿವಾಸಿ ಮಹಮ್ಮದ್ ರಫೀಕ್ ಎಂಬವರ ಪುತ್ರ ಮಹಮ್ಮದ್ ರಂಝೀನ್(10) ಮೃತ ಬಾಲಕ.
ಲಾಯಿಲದಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದ ಬಾಲಕ ಅಂಗಡಿಗೆ ಹೋಗಿ ಲಾಯಿಲ ಜಂಕ್ಷನ್ ನಲ್ಲಿ ವಾಪಾಸ್ ರಸ್ತೆ ದಾಟುತ್ತಿದ್ದ ವೇಳೆ ಉಜಿರೆಯಿಂದ ಬಂದ ಪಿಕಪ್ ಢಿಕ್ಕಿ ಹೊಡೆದಿದೆ.
ಈ ವೇಳೆ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡ ಬಾಲಕನನ್ನು ಸ್ಥಳೀಯರ ಸಹಕಾರದಿಂದ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ.
ಘಟನೆಯ ಬಗ್ಗೆ ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.