ಬೆಳ್ತಂಗಡಿ;ಹಲ್ಲೆಗೆ ಯತ್ನ, ಸೌಜನ್ಯ ತಾಯಿಯಿಂದ ಪೊಲೀಸ್ ದೂರು

ಬೆಳ್ತಂಗಡಿ:ಅಪರಿಚಿತ ವ್ಯಕ್ತಿಗಳಿಂದ ಮಾನಹಾನಿಗೆ ಯತ್ನ ಮತ್ತು ತನ್ನ ಮಗನಿಗೆ ಹಲ್ಲೆ ನಡೆಸಿದ ಬಗ್ಗೆ ಧರ್ಮಸ್ಥಳದ ಸೌಜನ್ಯ ತಾಯಿ ಕುಸುಮಾವತಿ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನನ್ನ ಮಗಳು ಸೌಜನ್ಯಾಗೆ 11 ವರ್ಷಗಳ ಹಿಂದೆ ಅತ್ಯಾಚಾರ ಮತ್ತು ಹತ್ಯೆ ಮಾಡಲಾಗಿದೆ.ಈ ಕೃತ್ಯದ ನೈಜ ಆರೋಪಿಗಳನ್ನು ಪತ್ತೆ ಹಚ್ಚಿ ಶಿಕ್ಷೆಗೊಳಪಡಿಸುವಂತೆ ನಾನು 11 ವರ್ಷದಿಂದ ಹೋರಾಟ ನಡೆಸುತ್ತಿದ್ದು, ಅದೇ ಉದ್ದೇಶದಿಂದ ಆ.4ರಂದು ಉಜಿರೆಯಲ್ಲಿ ಸಭೆಯೊಂದನ್ನು ಆಯೋಜಿಸಿರುವುದನ್ನು ತಿಳಿದು ನ್ಯಾಯಕ್ಕಾಗಿ ಕುಟುಂಬದೊಂದಿಗೆ ತೆರಳಿದ್ದೇನೆ ಎಂದು ಹೇಳಿದ್ದಾರೆ.

ಈ ಸಂದರ್ಭ ಅಪರಿಚಿತ ವ್ಯಕ್ತಿಗಳು ತನ್ನನ್ನು ತಡೆದು ಮಾನಹಾನಿಗೆ ಯತ್ನಿಸಿದ್ದಲ್ಲದೆ, ತನ್ನ ಮಗ ಜಯರಾಮನಿಗೂ ಹಲ್ಲೆ ನಡೆಸಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ