ಬೆಳ್ತಂಗಡಿ:ಉಯ್ಯಾಲೆಯಲ್ಲಿ ಆಡುವಾಗ ಕುತ್ತಿಗೆಗೆ ಉಯ್ಯಾಲೆಯ ಹಗ್ಗ ಸಿಲುಕಿ ಬಾಲಕನೋರ್ವ ಮೃತಪಟ್ಟಿರುವ ಘಟನೆ ದಿಡುಪೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಬಾಲಕೃಷ್ಣ ಎಂಬವರ ಪುತ್ರ 8ನೇ ತರಗತಿ ವಿದ್ಯಾರ್ಥಿ ಶ್ರೀಷಾ (14) ಮೃತ ಬಾಲಕ.
ಬಾಲಕ ಮನೆಯ ಅಂಗಳದಲ್ಲಿ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಆಕಸ್ಮಿಕವಾಗಿ ಕುತ್ತಿಗೆಗೆ ಅದರ ಹಗ್ಗ ಸಿಲುಕಿ ಕೆಳಗೆ ಬಿದ್ದಿದ್ದಾನೆ.ಕೂಡಲೇ ಬಾಲಕನನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.ಆದರೆ ದಾರಿ ಮದ್ಯೆ ಅವರು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.
ಘಟನೆ ನಡೆದ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಧನರಾಜ್ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.