ಬೆಳ್ತಂಗಡಿ; ದುರ್ವಾಸನೆ ಬರುತ್ತಿದ್ದ ಸಾರ್ವಜನಿಕ ಟ್ಯಾಂಕ್ ನಿಂದ ಬಂದ ಕುಡಿಯುವ ನೀರು, ಪರಿಶೀಲಿಸಿದಾಗ ಟ್ಯಾಂಕ್ ಒಳಗಡೆ ಶವ ಪತ್ತೆ

ಬೆಳ್ತಂಗಡಿ;ನೀರು ದುರ್ವಾಸನೆ ಬರುತ್ತಿರುವುದನ್ನು ಗಮನಿಸಿ ಪರಿಶೀಲಿಸಿದಾಗ ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ಅಪರಿಚಿತ ವ್ಯಕ್ತಿಯ ಕೊಳೆತ ಶವ ಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾಯರ್ತಡ್ಕ ಬಳಿ ನಡೆದಿದೆ.

ನಿನ್ನೆ ಬೆಳಿಗ್ಗೆ ಈ ಟ್ಯಾಂಕ್‌ನಿಂದ ಸ್ಥಳೀಯ ಪರಿಸರದಲ್ಲಿ ನೀರು ಪೂರೈಕೆ ಮಾಡಲಾಗಿದ್ದು, ನೀರು ದುರ್ವಾಸನೆ ಬರುತ್ತಿರುವುದನ್ನು ಸಾರ್ವಜನಿಕರು ಪಂಚಾಯಿತ್ ಗಮನಕ್ಕೆ
ತಂದಿದ್ದಾರೆ.

ಸಂಬಂಧಪಟ್ಟವರು ಈ ಕುರಿತು ಬಂದು ಪರಿಶೀಲಿಸಿದಾಗ ನೀರಿನ ಟ್ಯಾಂಕ್ ನಲ್ಲಿ ಅಪರಿಚಿತ ವ್ಯಕ್ತಿಯ ಶವ ತೇಲಾಡುತ್ತಿರುವುದು ಪತ್ತೆಯಾಗಿದೆ.

ಶವ ಕೊಳೆತು ಹೋಗಿದ್ದು, ಟ್ಯಾಂಕ್ ನೀರು ಬಳಸುವ ಸಾರ್ವಜನಿಕರಲ್ಲಿ ವಾಟ್ಸಪ್ ಮೂಲಕ ಗ್ರಾಮಸ್ಥರು ಈ ನೀರು ಬಳಸಿದಂತೆ ವಿನಂತಿಸಿದ್ದಾರೆ.ಸ್ಥಳಕ್ಕೆ ಧರ್ಮಸ್ಥಳ‌ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

ಇನ್ನು ಕಾಯರ್ತಡ್ಕದ ವೈನ್ ಶಾಪ್ ಒಂದರಲ್ಲಿ ಕೆಲಸಕ್ಕಿದ್ದ ಉತ್ತರ ಭಾರತದ ವ್ಯಕ್ತಿ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದು ಈತನ ಮೃತದೇಹವೇ? ಎಂಬ ಬಗ್ಗೆ ಕೂಡ ತನಿಖೆ ನಡೆಯುತ್ತಿದೆ.

ಟಾಪ್ ನ್ಯೂಸ್

ಹಿಂದೂ ಯುವತಿಯನ್ನು “ಕೇರಳ ಸ್ಟೋರಿ” ವೀಕ್ಷಿಸಲು ಕರೆದೊಯ್ದ ಸಂಸದೆ ಪ್ರಜ್ಞಾ ಸಿಂಗ್; ಆಕೆ ಸಿನಿಮಾ ನೋಡಿದ ಮರುದಿನವೇ ತನ್ನ ಮುಸ್ಲಿಂ ಪ್ರೇಮಿಯೊಂದಿಗೆ ಪರಾರಿ!- ವರದಿ

ಭೋಪಾಲ್‌; 19 ವರ್ಷದ ಹಿಂದೂ ಸಮುದಾಯದ ನರ್ಸಿಂಗ್ ವಿದ್ಯಾರ್ಥಿನಿ ತನ್ನ ನಿಗದಿಯಾಗಿದ್ದ ಮದುವೆಗೆ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com