ಬೆಳ್ತಂಗಡಿ; ಖಾಸಗಿ ಕಾಲೇಜಿನ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವು

-ಸನಾವುಲ್ಲಾ ಮತ್ತು ಪರ್ವೀನ್ ದಂಪತಿಯ ಪುತ್ರಿ ಉಜ್ಮಾ ಮೃತರು.

ಬೆಳ್ತಂಗಡಿ:ಖಾಸಗಿ ಕಾಲೇಜೊಂದರಲ್ಲಿ ನೀಟ್‌ ಕೋಚಿಂಗ್ ಗೆ ಎಂದು ಬಂದ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ನಿವಾಸಿ ಉಮೆ ಉಜ್ಮಾ ಎಸ್‌.(19) ಮೃತಪಟ್ಟ ವಿದ್ಯಾರ್ಥಿನಿ.

ಕುವೆಟ್ಟು ಸಮೀಪದ ಖಾಸಗಿ ಕಾಲೇಜೊಂದರಲ್ಲಿ ಮೆಡಿಕಲ್‌ ಕೋರ್ಸ್‌ ಪ್ರವೇಶಕ್ಕಾಗಿ ಉಜ್ಮಾ ನೀಟ್‌ ವಿದ್ಯಾಭ್ಯಾಸ ಮಾಡಿಕೊಂಡಿದ್ದು ಇಲ್ಲಿನ ಕಾಲೇಜು ಹಾಸ್ಟೆಲ್‌ನಲ್ಲಿ ಉಳಿದುಕೊಂಡಿದ್ದಳು.

ನಿನ್ನೆ ಬೆಳಿಗ್ಗೆ ರೂಮಿನಿಂದ ಹೊರಕ್ಕೆ ಹೋದವಳು ಕಟ್ಟಡದಿಂದ ಬಿದ್ದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಈ ಬಗ್ಗೆ ಕುಟುಂಬ ಸಂಶಯ ವ್ಯಕ್ತಪಡಿಸಿದೆ‌.ಆತ್ಮಹತ್ಯೆಯ ಶಂಕೆ ಕೂಡ ಮೂಡಿದೆ.

ಈ ಕುರಿತು ಉಜ್ಮಾ ತಂದೆ ಸನಾವುಲ್ಲಾ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಉಜ್ಮಾ,ಸನಾವುಲ್ಲ ಮತ್ತು ಪರ್ವೀನ್ ದಂಪತಿಯ ಪುತ್ರಿಯಾಗಿದ್ದಾರೆ.

ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ತೆರಳಿ ಪರಿಶೀಲನೆ ನಡೆಸಿ ಮುಂದಿನ‌ ಕ್ರಮ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com