ಬಂಗಾಳ ಕೊಲ್ಲಿಯಲ್ಲಿ ಹೆಚ್ಚಿದ ಗಾಳಿ ಸುತ್ತುವರಿಕೆ ಪ್ರಮಾಣ, ಭಾರೀ ಬದಲಾವಣೆ; ಚಂಡಮಾರುತದ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ನವದೆಹಲಿ;ಮೇ.6ರಂದು ಬಂಗಾಳಕೊಲ್ಲಿಯಲ್ಲಿ ಈ ವರ್ಷದ ಮೊದಲ ಚಂಡಮಾರುತ ಸೃಷ್ಟಿಯಾಗುವ ಸಾಧ್ಯತೆ ಬಗ್ಗೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಒಂದು ವಾರದಿಂದ ಭೂಮೇಲ್ಮೈ, ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಸೃಷ್ಟಿಯಾಗಿದೆ.
ಇದೀಗ ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ಮೇ 6ರಂದು ಶನಿವಾರ ಚಂಡಮಾರುತ ಪರಿಚಲನೆ ಬೆಳೆಯುವ ಸಾಧ್ಯತೆಯಿದೆ.

ಇದರಿಂದ ಮುಂದಿನ 48 ಗಂಟೆಗಳ ಅವಧಿಯಲ್ಲಿ ಬಂಗಾಳಕೊಲ್ಲಿ ಭಾಗದಲ್ಲಿ ಕಡಿಮೆ ಒತ್ತಡ ಪ್ರದೇಶ ನಿರ್ಮಾಣವಾಗಿ ವಾಯುಭಾರತ ಕುಸಿತಗೊಳ್ಳಲಿದೆ. ಈಗಾಗಲೇ ಆಗ್ನೇಯ ಭಾಗದಲ್ಲಿ ಗಾಳಿ ಸುತ್ತುವರಿಯುವಿಕೆ ಪ್ರಮಾಣ ಹೆಚ್ಚಾಗುತ್ತಿದೆ ಎನ್ನಲಾಗಿದೆ.

ಮುಂದಿನ 120 ಗಂಟೆಗಳವರೆಗೆ ಬಂಗಾಳ ಕೊಲ್ಲಿ ಮತ್ತು ಅರೇಬಿಯನ್ ಸಮುದ್ರದ ಹವಾಮಾನದಲ್ಲಿ ಸಾಕಷ್ಟು ಬದಲಾವಣೆಗಳು ಆಗಲಿವೆ.ಬಂಗಾಳಕೊಲ್ಲಿಯಲ್ಲಿನ ವಾಯುಭಾರತ ಕುಸಿತ ಮೇ 6ರ ವರೆಗೆ ದಿನೇ ದಿನೆ ತೀವ್ರಗೊಳ್ಳುತ್ತಾ ಸಾಗಲಿದೆ. ಶನಿವಾರ ನಿಖರ ಚಂಡಮಾರುತವಾಗಿ ಹೊರ ಹೊಮ್ಮುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಚಂಡಮಾರುತದಿಂದ ತಮಿಳುನಾಡು, ಪಶ್ಮಿಮ ಬಂಗಾಳ, ಆಂಧ್ರಪ್ರದೇಶ, ಕರ್ನಾಟಕದಲ್ಲಿ ಅತ್ಯಧಿಕ ಮಳೆ ಬೀಳಲಿದೆ ಎನ್ನಲಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ತೀವ್ರತೆ ಹೆಚ್ಚಾದರೆ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ, ಚಿಕ್ಕಮಗಳೂರು ಸೇರಿದಂತೆ ವಿವಿಧೆಡೆ ಭಾರೀ ಮಳೆ ಬರಲಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

ಪ್ರವೀಣ್ ನೆಟ್ಟಾರು ಪತ್ನಿಗೆ ತೋರಿದ ಮಾನವೀಯತೆ ಫಾಝಿಲ್ & ಮಸೂದ್ ಕುಟುಂಬಕ್ಕೆ ತೋರಿಸುತ್ತಾರ ಸಿದ್ದರಾಮಯ್ಯ?ಬಿಜೆಪಿ ಅವಧಿಯಲ್ಲಿ ಹತ್ಯೆಯಾದ ಯುವಕರಿಬ್ಬರ ಕುಟುಂಬಕ್ಕೆ ಪರಿಹಾರ ಕೊಡಿಸುವಲ್ಲಿ‌ ಕಾಂಗ್ರೆಸ್ಸಿಗರು ಮೌನ?

BIG NEWS ತೀವ್ರಗೊಂಡ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆ, ನೂತನ ಸಂಸತ್ ಭವನಕ್ಕೆ ಮೆರವಣಿಗೆ ತೆರಳಲು ಯತ್ನ; ಸಾಕ್ಷಿ ಮಲಿಕ್, ವಿನೇಶ್ ಪೋಗಟ್ ಸೇರಿ ಹಲವರು ವಶಕ್ಕೆ

ನವದೆಹಲಿ;ನೂತನ ಸಂಸತ್​ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸುತ್ತಿದ್ದ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿದ್ದಾರೆ.

Developed by eAppsi.com