ಮಂಗಳೂರು;ಪೊಲೀಸರ ಕರ್ತವ್ಯಕ್ಕೆ ಅಡ್ಡಿ,ಬೆಂಗರೆ ನಿವಾಸಿ ಅರೆಸ್ಟ್
ಮಂಗಳೂರು;ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ದನ ಕಳ್ಳತನ ಪ್ರಕರಣಗಳ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ
ಕಸಬಾ ಬೆಂಗರೆಯ ಅಬ್ದುಲ್ ಕಬೀರ್(35)ಬಂಧಿತ.
ಈತ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ 8 ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಈತನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಲು ತೆರಳಿದಾಗ ಕರ್ತವ್ಯಕ್ಕೆ ಅಡ್ಡಿಪಡಿಸಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಈತ ಪರಾರಿಯಾಗಲು ಯತ್ನಿಸಿದ್ದಾನೆ ಎನ್ನಲಾಗಿದೆ. ಇದೀಗ ಸಿಸಿಬಿ ಪೊಲೀಸರು ಆರೋಪಿ ಕಬೀರ್‌ನನ್ನು ಪಣಂಬೂರು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.