ಭಟ್ಕಳ; ಮನೆಗೆ ನುಗ್ಗಿ ನಾಲ್ವರ ಬರ್ಬರ ಹತ್ಯೆ; ರಾಜ್ಯವನ್ನೇ ಬೆಚ್ಚಿಬೀಳಿಸಿದ ಕೃತ್ಯ ನಡೆಸಿದ ಆರೋಪಿಗಳ ಬಗ್ಗೆ ಪೊಲೀಸರಿಗೆ ಸಿಕ್ಕಿದ ಮಹತ್ವದ ಮಾಹಿತಿ..

ಭಟ್ಕಳ;ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸುವ ಘಟ‌ನೆ ಭಟ್ಕಳದಿಂದ ವರದಿಯಾಗಿದೆ. ಆಸ್ತಿಗಾಗಿ ಒಂದೇ ಮನೆಯ ನಾಲ್ವರ ಕೊಲೆ ನಡೆದಿದೆ.

ಭಟ್ಕಳ ತಾಲೂಕಿನ ಹಾಡುವಳ್ಳಿಯಲ್ಲಿ ಶಂಭು ಭಟ್ (65), ಅವರ ಪತ್ನಿ ಮಾದೇವಿ ಭಟ್ (40), ಪುತ್ರ ರಾಜೀವ್ ಭಟ್ (34) ಹಾಗೂ ಸೊಸೆ ಕುಸುಮಾ ಭಟ್ (30) ಕೊಲೆಯಾದವರು. ಮನೆಯ ಹೊರಗಡೆ ನಾಲ್ವರ ಶವ ಚೆಲ್ಲಾಪಿಲ್ಲಿಯಾಗಿ ಕಂಡು ಬಂದಿದೆ. ನಾಲ್ವರನ್ನು ಅಟ್ಟಾಡಿಸಿ ಕತ್ತಿಯಿಂದ ಕಡಿದು ಕೊಲೆ ಮಾಡಲಾಗಿದೆ.

ಕೊಲೆಯ ವೇಳೆ ನಾಲ್ಕು ವರ್ಷದ ಮಗು ಮಲಗಿದ್ದರಿಂದ ಹಾಗೂ ಇನ್ನೊಂದು ಮಗು ಪಕ್ಕದ ಮನೆಯಲ್ಲಿ ಆಟವಾಡುತ್ತಿದ್ದುದರಿಂದ ಬದುಕುಳಿದಿದೆ.

ಶಂಭು ಭಟ್ ಅವರ ಹಿರಿಯ ಸೊಸೆ ವಿದ್ಯಾ ಭಟ್​ ಕುಟುಂಬಸ್ಥರಿಂದ ಈ ಕೊಲೆ ನಡೆದಿರುವ ಶಂಕೆ ಇದೆ. ಈಕೆಯ ಪತಿ ಶ್ರೀಧರ್ ಭಟ್​ ಕೆಲವು ತಿಂಗಳ ಹಿಂದೆ ಮೂತ್ರಪಿಂಡ ವೈಫಲ್ಯದಿಂದ ಮೃತಪಟ್ಟಿದ್ದರು.

ಆ ಬಳಿಕ ಶಂಭು ಭಟ್ ಬಳಿ ಜೀವನಾಂಶಕ್ಕೆ ಆಸ್ತಿಯಲ್ಲಿ ಪಾಲು ಕೊಡುವಂತೆ ವಿದ್ಯಾ ಭಟ್​ ಕುಟುಂಬಸ್ಥರು ಕೇಳಿದ್ದರು. ಇದೇ ವಿಚಾರವಾಗಿ ಹಲವು ಬಾರಿ ಎರಡೂ ಕುಟುಂಬಗಳ ನಡುವೆ ಗಲಾಟೆ ಆಗಿತ್ತು. ಕೊನೆಗೆ ವಿದ್ಯಾ ಭಟ್​ಗೆ ಶಂಭು ಭಟ್​ ಆಸ್ತಿಯಲ್ಲಿ ಪಾಲು ನೀಡಿದ್ದರು.
ಆ ಆಸ್ತಿಯನ್ನು ವಿನಯ್ ಭಟ್‌ ಎಂಬಾತ ನೋಡಿಕೊಳ್ಳುತ್ತಿದ್ದು, ಆತನೇ ಈ ಕೊಲೆ ನಡೆಸಿದ್ದಾನೆ ಎನ್ನಲಾಗಿದೆ. ಸದ್ಯಕ್ಕೆ ವಿನಯ್ ಭಟ್ ಪರಾರಿಯಾಗಿ ತಲೆಮರೆಸಿಕೊಂಡಿದ್ದು, ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆ;ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದೇಕೆ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು;ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ

Developed by eAppsi.com